ಸುದ್ದಿ

ಕುತೂಹಲ ಕೆರಳಿಸಿದ ನಟ ಕಿಚ್ಚಾ ಸುದೀಪ್, ಎಚ್ ಡಿಕೆ ಭೇಟಿ!

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ನಟ ಕಿಚ್ಚಾ ಸುದೀಪ್ ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಮೂಲಗಳ ಪ್ರಕಾರ ಕುಮಾರಸ್ವಾಮಿ ಅವರ ಬೆಂಗಳೂರಿನ ಜೆಪಿ ನಗರ ನಿವಾಸಕ್ಕೆ ನಟ ಸುದೀಪ್ ಅವರು ಆಗಮಿಸಿದ್ದು, ಸುಮಾರು 2 ಗಂಟೆಗೂ ಅಧಿಕ ಸಮಯ ಚರ್ಚೆ ನಡೆಸಿದ್ದಾರೆ. ಸುದೀಪ್ ಭೇಟಿ ವೇಳೆ ಕುಮಾರಸ್ವಾಮಿ ಅವರ ಪುತ್ರ ನಿಖಿಲ್, ಪತ್ನಿ ಅನಿತಾ ಕುಮಾರಸ್ವಾಮಿ ಅವರೂ ಕೂಡ ಇದ್ದರು. ಕುಮಾರಸ್ವಾಮಿ ನಿವಾಸದಲ್ಲೇ ಸುದೀಪ್ ಬೆಳಗಿನ ಉಪಾಹಾರ ಕೂಡ ಸವಿದಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತು ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ನಟ ಸುದೀಪ್ ಗೌಡರ ಕುಟುಂಬದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.

About the author

ಕನ್ನಡ ಟುಡೆ

Leave a Comment