ರಾಷ್ಟ್ರ

ಕುಪ್ವಾರ ಎನ್’ಕೌಂಟರ್ ಮತ್ತಷ್ಟು ಉಗ್ರರು ಅಡಗಿರುವ ಶಂಕೆ

ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಮತ್ತಷ್ಟು ಉಗ್ರರು ಅಡಗಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಭಾರತೀಯ ಸೇನಾ ಪಡೆ ಭಾರೀ ಕಾರ್ಯಾಚರಣೆ ನಡೆಸುತ್ತಿದೆ ಎಂದು ಇಂದು ತಿಳಿದುಬಂದಿದೆ.

ಕುಪ್ವಾರ ಜಿಲ್ಲೆಯ ದಟ್ಟ ಅರಣ್ ಪ್ರದೇಶದಲ್ಲಿ ಅಡಗಿ ಕುಳಿತಿದ್ದ ಉಗ್ರರ ವಿರುದ್ಧ ಸೇನಾಪಡೆ ನಿನ್ನೆಯಷ್ಟೇ ಎನ್’ ಕೌಂಟರ್ ನಡೆಸಿ ಐವರು ಉಗ್ರರನ್ನು ಹೊಡೆದುರುಳಿಸಿತ್ತು. ಉಗ್ರರು ಹಾಗೂ ಸೇನಾಪಡೆಗಳ ನಡುವೆ ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸರು ಹಾಗೂ ಮೂವರು ಯೋಧರು ಹುತಾತ್ಮರಾಗಿದ್ದರು.

ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವುದಾಗಿ ಗುಪ್ತಚರ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿರುವ ಹಿನ್ನಲೆಯಲ್ಲಿ ಸ್ಥಳದಲ್ಲಿ ಭಾರತೀಯ ಸೇನಾಪಡೆ ಕಾರ್ಯಾಚರಣೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

 

 

About the author

ಕನ್ನಡ ಟುಡೆ

Leave a Comment