ರಾಜ್ಯ ಸುದ್ದಿ

ಕುಮಾರಸ್ವಾಮಿ ಕ್ಷಮೆಯಾಚನೆಗೆ ಬಿ.ಎಸ್‌.ಯಡಿಯೂರಪ್ಪ ಆಗ್ರಹ

ಬೆಂಗಳೂರು: ಮದ್ದೂರಿನ ಜೆಡಿಎಸ್‌ ಕಾರ್ಯಕರ್ತ ಪ್ರಕಾಶ್‌ ಹತ್ಯೆ ಆರೋಪಿಗಳನ್ನು ಶೂಟೌಟ್‌ ಮಾಡಬೇಕೆಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೀಡಿದ್ದ ಹೇಳಿಕೆ ತೀವ್ರ ವಿವಾದದ ಸ್ವರೂಪ ಪಡೆದುಕೊಂಡಿರುವುದರ ನಡುವೆಯೇ ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ಸಿಎಂ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದೆ.

”ಮುಖ್ಯಮಂತ್ರಿ ಹೇಳಿಕೆ ರಾಜ್ಯದ ಜನತೆ ಮೇಲೆ ದುಷ್ಪರಿಣಾಮ ಬೀರುತ್ತದೆ, ಇದರಿಂದ ಪೊಲೀಸ್‌ ಅಧಿಕಾರಿಗಳಿಗೆ ಫ್ರೀಹ್ಯಾಂಡ್‌ ನೀಡಿದಂತಾಗುತ್ತದೆ. ಮುಖ್ಯಮಂತ್ರಿಯಾದವರು ಈ ರೀತಿ ಮಾತನಾಡುವುದು ತಪ್ಪು,” ಎಂದು ಅಭಿಪ್ರಾಯಪಟ್ಟಿರುವ ಯಡಿಯೂರಪ್ಪ ಅವರು ”ಮುಖ್ಯಮಂತ್ರಿಯಾಗಿಯೇ ಆ ಮಾತು ಹೇಳಿದ್ದಾರೆ, ಮುಖ್ಯಮಂತ್ರಿಯಾಗಿರದಿದ್ದರೆ ಅದು ಬೇರೆ ಮಾತು, ಸಿಎಂ ಸ್ಥಾನದಲ್ಲಿ ಕುಳಿತು ಈ ರೀತಿ ಹೇಳಿಕೆ ಕೊಡುವುದು ಸರಿಯಲ್ಲ, ಇದು ಅರಾಜಕತೆಯನ್ನು ತೋರಿಸುತ್ತದೆ,” ಎಂದು ಹೇಳಿದ್ದಾರೆ.

About the author

ಕನ್ನಡ ಟುಡೆ

Leave a Comment