ರಾಷ್ಟ್ರ ಸುದ್ದಿ

ಕುಲಭೂಷಣ್‌ ಜಾಧವ್‌ ಪ್ರಕರಣ ಸಂಬಂಧ ರಾಜತಾಂತ್ರಿಕ ನೆರವು ಕೋರಿದ ಭಾರತ

ನವದೆಹಲಿ: ಪಾಕಿಸ್ತಾನದ ವಿರುದ್ಧ ಬೇಹುಗಾರಿಕೆ ಮಾಡಿದ ಆರೋಪದಲ್ಲಿ ಪಾಕಿಸ್ತಾನದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾ ಪಡೆಯ ಮಾಜಿ ಅಧಿಕಾರಿ ಕುಲಭೂಷಣ್‌ ಜಾಧವ್‌ ವಿಚಾರವಾಗಿ ಭಾರತ ರಾಜತಾಂತ್ರಿಕ ನೆರವು ಕೋರಿದೆ. ಇಂಧೋರ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು, ಎರಡು ದಿನಗಳ ಹಿಂದೆಯೇ ಕೇಂದ್ರ ವಿದೇಶಾಂಗ ಇಲಾಖೆಯಿಂದ ಈ ಪ್ರಕ್ರಿಯೆ ನಡೆದಿದೆ. ಅಂತೆಯೇ ಫೆಬ್ರವರಿ 18ರಿಂದ 21ರವರೆಗೆ ಹೇಗ್‌ ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಪ್ರಕರಣದ (ಐಸಿಜೆ) ವಿಚಾರಣೆ ನಡೆಯಲಿದೆ ಎಂದು ಹೇಳಿದರು.

ಬೇಹುಗಾರಿಕೆ ಮತ್ತು ಪಾಕಿಸ್ತಾನದಲ್ಲಿ ಭಯೋತ್ಪಾದನೆ ನಡೆಸಿರುವ ಆರೋಪದಲ್ಲಿ ಕುಲಭೂಷಣ್ ಜಾಧವ್‌ ಗೆ ಪಾಕಿಸ್ತಾನದ ಸೇನಾ ನ್ಯಾಯಾಲಯ ಕಳೆದ ಏಪ್ರಿಲ್‌ನಲ್ಲಿ ಮರಣದಂಡನೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಮೇ ತಿಂಗಳಲ್ಲಿ ಭಾರತ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ ಮಾಡಿದೆ. ಅಲ್ಲದೇ, ತಮ್ಮ ವಾದ ಮಂಡಿಸಲು ಮತ್ತು ಭಾರತದ ರಾಯಭಾರ ಕಚೇರಿ ಸಂಪರ್ಕಿಸಲು ಜಾಧವ್ ಗೆ ಪಾಕಿಸ್ತಾನ ಅವಕಾಶ ಕೊಟ್ಟಿಲ್ಲ ಎಂದು ಈ ಹಿಂದೆ ಭಾರತ ಆರೋಪಿಸಿತ್ತು.

About the author

ಕನ್ನಡ ಟುಡೆ

Leave a Comment