ರಾಷ್ಟ್ರ

ಕೃಷ್ಣಮೃಗ ಬೇಟೆ ಪ್ರಕರಣ: ಸಲ್ಮಾನ್ ಖಾನ್ ಜಾಮೀನು ಅರ್ಜಿ ಆದೇಶ ನಾಳೆಗೆ ಮುಂದೂಡಿಕೆ

ಜೋಧ್ ಪುರ: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ನಟ ಸಲ್ಮಾನ್ ಖಾನ್ ಜಾಮೀನು ಅರ್ಜಿ ಆದೇಶವನ್ನು ಜೋಧ್ ಪುರ ನ್ಯಾಯಾಲಯ ನಾಳೆಗೆ ಮುಂದೂಡಿದೆ.
ನಿನ್ನೆ ನಡೆದ ವಿಚಾರಣೆಯಲ್ಲಿ ತನ್ನ ಅಂತಿಮ ತೀರ್ಪು ಪ್ರಕಟ ಮಾಡಿದ್ದ ಜೋದ್ ಪುರ ನ್ಯಾಯಾಲಯ ನಟ ಸಲ್ಮಾನ್ ಖಾನ್ ಗೆ 5 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿತ್ತು. ಈ ತೀರ್ಪು ಹೊರಬಿದ್ದ ಬೆನ್ನಲ್ಲೇ ಸಲ್ಮಾನ್ ಖಾನ್ ಪರ ವಕೀಲರು ಜೋದ್​ಪುರ ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಲಾಯಿತು.

About the author

ಕನ್ನಡ ಟುಡೆ

Leave a Comment