ರಾಜ್ಯ ಸುದ್ದಿ

ಕೆಆರ್‌ಎಸ್‌ ​​ಡಿಸ್ನಿಲ್ಯಾಂಡ್‌ಗೆ ಸರಕಾರದ ಬಂಡವಾಳ ಇಲ್ಲ: ಸಚಿವ ಡಿ.ಕೆ. ಶಿವಕುಮಾರ್

ಮಂಡ್ಯ: ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯ (ಕೆಆರ್​ಎಸ್​) ಬಳಿ ಡಿಸ್ನಿಲ್ಯಾಂಡ್​ ಮಾದರಿಯಲ್ಲಿ ಬೃಂದಾವನ ಉದ್ಯಾನ ಅಭಿವೃದ್ಧಿಪಡಿಸುವ ಮತ್ತು ಕಾವೇರಿ ಮಾತೆಯ ಪ್ರತಿಮೆ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್​ ಅವರು ಇಂದು ಸ್ಥಳ ಪರಿಶೀಲನೆ ನಡೆಸಿದರು.

ಶುಕ್ರವಾರ ಸಂಜೆ ಕೆಆರ್​ಎಸ್​ಗೆ ಭೇಟಿ ನೀಡಿದ್ದ ಡಿಕೆಶಿ ಶನಿವಾರ ಬೆಳಗ್ಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಕೆಆರ್​ಎಸ್​ ಅಣೆಕಟ್ಟೆಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಯೋಜನೆ ಅನುಷ್ಠಾನದ ಕುರಿತು ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದುಕೊಂಡರು. ಡಿಕೆಶಿಯೊಂದಿಗೆ ಸಚಿವರಾದ ಸಾ.ರಾ.ಮಹೇಶ್, ಡಿ.ಸಿ.ತಮ್ಮಣ್ಣ, ಸಿ.ಎಸ್.ಪುಟ್ಟರಾಜು ಸ್ಥಳ ಪರಿಶೀಲನೆ ನಡೆಸಿದರು.

ರವೀಂದ್ರ ಶ್ರೀಕಂಠಯ್ಯ ಗೈರು

ಶ್ರೀರಂಗಪಟ್ಟಣ ಕ್ಷೇತ್ರದ ಜೆಡಿಎಸ್​ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಸ್ಥಳ ಪರಿಶೀಲನೆಗೆ ಗೈರಾಗಿದ್ದಾರೆ. ಈ ಹಿಂದೆ ರವೀಂದ್ರ ಶ್ರೀಕಂಠಯ್ಯ ಅವರು ಅಣೆಕಟ್ಟೆ ಸಮೀಪ ಡಿಸ್ನಿಲ್ಯಾಂಡ್​ ಮಾದರಿ ಅಭಿವೃದ್ಧಿ ಮಾಡಲು ವಿರೋಧ ವ್ಯಕ್ತಪಡಿಸಿದ್ದರು. ಜತೆಗೆ ಯೋಜನೆ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿಲ್ಲವೆಂದು ಶಾಸಕರು ತಿಳಿಸಿದರು.

About the author

ಕನ್ನಡ ಟುಡೆ

Leave a Comment