ರಾಜ್ಯ ಸುದ್ದಿ

ಕೆಲವೇ ದಿನಗಳಲ್ಲಿ 10 ಸಾವಿರ ಕೋಟಿ ರೂ. ಸಾಲ ಮನ್ನಾ: ಸಿಎಂ

ಸಕಲೇಶಪುರ: ಸರಕಾರ ಅನ್ನದಾತನ ಪರವಾಗಿದ್ದು, ರೈತರು ಆತಂಕಕ್ಕೊಳಗಾಗಿ ದುಡುಕಿನ ನಿರ್ಧಾರ ತೆಗೆದುಕೊಳ್ಳುವುದು ಬೇಡ ಎಂದು ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಮನವಿ ಮಾಡಿದರು. ಸಿಎಂ ಕುಮಾರಸ್ವಾಮಿ ಅವರು ಪಟ್ಟಣದ ಎಪಿಎಂಸಿ ಪ್ರಾಂಗಣದಲ್ಲಿ ಮಂಗಳವಾರ ನಡೆದ ಎತ್ತಿನಹೊಳೆ ಯೋಜನೆಯ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.

ತಲೆ ತಲಾಂತರದಿಂದ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿರುವ ರೈತರಿಗೆ ಅನ್ಯಾಯವಾಗಲು ನಮ್ಮ ಸರಕಾರ ಬಿಡುವುದಿಲ್ಲ. ಮಾರ್ಚ್‌ ಅಂತ್ಯದೊಳಗೆ ಸುಮಾರು ಹತ್ತು ಸಾವಿರ ಕೋಟಿ ಸಾಲ ಮನ್ನಾ ಮಾಡುವ ಗುರಿ ಹೊಂದಿದೆ. ಇದರಲ್ಲಿ ಈಗಾಗಲೇ ಸುಮಾರು 4,130 ಕೋಟಿ ರೂ. ಬಿಡುಗಡೆಯಾಗಿದೆ. ಇದು 6.40 ಲಕ್ಷ ಕುಟುಂಬಗಳಿಗೆ ಸಂದಾಯ ಆಗಿದೆ’ ಎಂದು ಕುಮಾರಸ್ವಾಮಿ ತಿಳಿಸಿದರು.

ಮಾಜಿ ಪ್ರಧಾನಿ ಎಚ್‌. ಡಿ. ದೇವೇಗೌಡ ಮಾತನಾಡಿ, ‘ರೈತರ ಮನೆಯ ರಾಜ್ಯ ಸರಕಾರದಿಂದ ರೈತರಿಗೆ ಯಾವುದೆ ಅನ್ಯಾಯ ಆಗುವುದಿಲ್ಲ ಎಂಬ ವಿಶ್ವಾಸ ಇದೆ. ಯಾರೂ ಹೆದರುವ ಅಗತ್ಯ ಇಲ್ಲ. ಗ್ರಾಮೀಣ ರಸ್ತೆಗಳು, ಕುಡಿಯುವ ನೀರು ಇನ್ನಿತರೆ ಅವಶ್ಯಕತೆಗಳಿದ್ದರೆ ಮನವಿ ಸಲ್ಲಿಸಲಾಗುವುದು’ ಎಂದರು.

About the author

ಕನ್ನಡ ಟುಡೆ

Leave a Comment