ರಾಜ್ಯ ಸುದ್ದಿ

ಕೊಡಗು ಜಿಲ್ಲೆಗೆ ಕೇಂದ್ರದಿಂದ ಯಾವುದೇ ರೀತಿಯ ನಿರ್ದಿಷ್ಟ ನೆರವುಗಳು ಬಂದಿಲ್ಲ : ಮುಖ್ಯಮಂತ್ರಿ ಕುಮಾರಸ್ವಾಮಿ

ಮಡಿಕೇರಿ: ನೆರೆ ಪೀಡಿತ ಕೊಡಗು ಜಿಲ್ಲೆಗೆ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ನಿರ್ದಿಷ್ಟ ನೆರವುಗಳು ಬಂದಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಯವರು ಶುಕ್ರವಾರ ಹೇಳಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದಾಗಿ ಮನೆ, ಆಸ್ತಿ ಎಲ್ಲವನ್ನೂ ಕಳೆದುಕೊಂಡಿ ನಿರಾಶ್ರಿತರಾಗಿರುವ ಸಂತ್ರಸ್ತರಿಗೆ ಮನೆ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಯವರು ನಿನ್ನೆ ಚಾಲನೆ ನೀಡಿದರು. ಇದೇ ವೇಳೆ ಸೋಮವಾರಪೇಟೆ ತಾಲೂಕಿನ ಜಂಬೂರು ಗ್ರಾಮದಲ್ಲಿ ಗುರುತಿಸಲಾಗಿರುವ ಸ್ಥಳದಲ್ಲಿ ಮನೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದ ಪರಿಹಾರ ಹಣ ಕೇವಲ ಕೊಡಗು ಜಿಲ್ಲೆಗೆ ಮಾತ್ರವೇ ಅಲ್ಲ. ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದ ಹಣವನ್ನು ಅದರ ಮಾರ್ಗದರ್ಶನದಂತೆ ನೆರೆಪೀಡಿತ 8 ಜಿಲ್ಲೆಗಳಿಗೂ ಬಳಕೆ ಮಾಡಬೇಕೆಂದು ತಿಳಿಸಿದೆ ಎಂದು ಹೇಳಿದ್ದಾರೆ.
ಪ್ರಕೃತಿ ವಿರೋಪ ಪರಿಹಾರ ನಿಧಿಯಲ್ಲಿ ರೂ.202.23 ಕೋಟಿ ಸಂಗ್ರಹವಾಗಿದ್ದು, ಇದನ್ನು ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಬಳಕೆ ಮಾಡಲಾಗುವುದು. ಕೇಂದ್ರ ಸರ್ಕಾರದಿಂದ ರೂ.540 ಕೋಟಿ ಪರಿಹಾರ ಬಂದಿತದ್ದು, ಎನ್’ಡಿಆರ್’ಎಫ್ ನಿರ್ದೇಶನದಂತೆ ರಾಜ್ಯದ 8 ಜಿಲ್ಲೆಗಳಿಗೆ ಬಳಸಲಾಗುವುದು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಕೊಡಗು ಪ್ರಕೃತಿ ವಿರೋಪ ಸಂತ್ರಸ್ತರ ನಿಧಿಗೆ ರೂ.100 ಕೋಟಿ ನೀಡಲಾಯಿತು ಎಂದು ತಿಳಿಸಿದ್ದಾರೆ.

About the author

ಕನ್ನಡ ಟುಡೆ

Leave a Comment