ಪರಿಸರ

ಕೊಡಗು ಜಿಲ್ಲೆಯಲ್ಲಿ ಮತ್ತೆ ಭಾರಿ ಮಳೆ ಜನಜೀವನ ಅಸ್ತವ್ಯಸ್ತ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸತತವಾಗಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು ನಾನಾ ಕಡೆ ರಸ್ತೆ ಸಂಪರ್ಕ ಕಡಿತವಾಗಿದೆ. ಗುರುವಾರ ಕೊಡಗಿನ ಎಲ್ಲ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕಾವೇರಿ ಹಾಗೂ ಲಕ್ಷ್ಮಣ ತೀರ್ಥ ನದಿಗಳು ತುಂಬಿ ಹರಿಯುತ್ತಿವೆ. ಪೊನ್ನಂಪೇಟೆ, ಬಾಳೆಲೆ, ನಾಪೋಕ್ಲು, ಭಾಗಮಂಡಲ, ಐಯ್ಯಂಗೇರಿಯಲ್ಲಿ ಸಾವಿರಾರು ಎಕರೆ ಜಮೀನು ಜಲಾವೃತಗೊಂಡಿದೆ.

ಶೆಟ್ಟಿಗೇರಿ, ಶ್ರೀಮಂಗಲ ಹಾಗೂ ಕೊಟ್ಟಗೇರಿ, ಬಾಳೆಲೆ ಸೇತುವೆ ಮೇಲೆ ಲಕ್ಷ್ಮಣ ತೀರ್ಥ ನದಿ ನೀರು ಹರಿಯುತ್ತಿದೆ. ಈ ಮಾರ್ಗದಲ್ಲಿ ಕಳೆದೆರಡು ದಿನಗಳಿಂದ ವಾಹನ ಸಂಚಾರ ಸಾಧ್ಯವಾಗಿಲ್ಲ. ಭಾಗಮಂಡಲ ಸಂಪೂರ್ಣ ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

About the author

ಕನ್ನಡ ಟುಡೆ

Leave a Comment