ರಾಜ್ಯ ಸುದ್ದಿ

ಗಂಗಾವತಿಯಲ್ಲಿಂದು ನರೇಂದ್ರ ಮೋದಿ ಪ್ರಚಾರ ಸಭೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಗಂಗಾವತಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಕಾರ್ಯಕರ್ತರನ್ನು ಹುರಿದುಂಬಿಸುವ ಜತೆಗೆ ಮತ ಯಾಚನೆ ಮಾಡಲಿದ್ದಾರೆ. ಶನಿವಾರ ಮಧ್ಯಾಹ್ನ 3 ಗಂಟೆಗೆ ಮಂಗಳೂರಿನ ಕೇಂದ್ರ ಮೈದಾನ ಹಾಗೂ ಸಂಜೆ 5.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

About the author

ಕನ್ನಡ ಟುಡೆ

Leave a Comment