ರಾಷ್ಟ್ರ

ಗಂಡುಮಕ್ಕಳನ್ನು ಜವಾಬ್ದಾರಿಯುತರನ್ನಾಗಿ ಮಾಡಿ ಮತ್ತು ಹೆಣ್ಣು ಮಕ್ಕಳನ್ನು ಗೌರವಿಸಿ: ನರೇಂದ್ರ ಮೋದಿ ಜೀ

ನವದೆಹಲಿ: ಮಕ್ಕಳ ಮೇಲಿನ ಅತ್ಯಾಚಾರಗಳ ಕುರಿತಾಗಿ ಸರ್ಕಾರ ಸಕ್ರೀಯವಾಗಿದ್ದು, ಕಠಿಣ ಕ್ರಮಕ್ಕೆ ಮುಂದಾಗಿದೆ. ಆದರೆ ಜನರು ತಮ್ಮ ಹೆಣ್ಣು ಮಕ್ಕಳನ್ನು ಗೌರವಿಸಿ ಗಂಡು ಮಕ್ಕಳನ್ನು ಜವಾಬ್ದಾರಿಯುತವಾಗಿ ಬೆಳೆಸಬೇಕು ಎಂದು ಹೇಳಿದ್ದಾರೆ.

ಮಧ್ಯಪ್ರದೇಶದ ಮಂಡ್ಲದಲ್ಲಿಂದು ರಾಷ್ಟ್ರೀಯ ಪಂಚಾಯತ್ ರಾಜ್ ಸಮ್ಮೇಳನದಲ್ಲಿ ಮಾತನಾಡಿ ಮಹಿಳೆಯರು ಮತ್ತು ಬಾಲಕಿಯರಿಗೆ ಸುರಕ್ಷತೆ ಹೆಚ್ಚಿಸುವುದು ಸಾಮಾಜಿಕ ಆಂದೋಲನವಾಗಿ ಮಾರ್ಪಡಬೇಕಾಗಿದೆ. ಎಲ್ಲರ ಧ್ವನಿಯನ್ನು ಆಲಿಸಿ ಕೇಂದ್ರ ಸರ್ಕಾರ ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ವಿಧಿಸುವ ನಿರ್ಧಾರವನ್ನು ಕೈಗೊಂಡಿದ್ದು ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಸುಗ್ರೀವಾಜ್ಞೆ ತರಲಾಗಿದೆ ಎಂದು ತಿಳಿಸಿದರು.

ಹೆಣ್ಣುಮಕ್ಕಳ ಸುರಕ್ಷತೆಗಾಗಿ ಸೂಕ್ತ ವಾತವಾರಣ ಸೃಷ್ಟಿಸಬೇಕಾಗಿದೆ. ಕುಟುಂಬದವರು ಅವರ ಹೆಣ್ಣುಮಕ್ಕಳಿಗೆ ಗೌರವ ನೀಡಬೇಕಾಗಿದೆ. ತಮ್ಮ ಗಂಡು ಮಕ್ಕಳನ್ನು ಹೆಚ್ಚು ಜವಾಬ್ದಾರಿಯುತರನ್ನಾಗಿ ಮಾಡಬೇಕು, ಹೆಣ್ಣುಮಕ್ಕಳಿಗೆ ಸುರಕ್ಷತೆ ಒದಗಿಸುವುದು ಕಷ್ಟಕರ ಕೆಲಸವಲ್ಲ. ಈ ನಿಟ್ಟಿನಲ್ಲಿ ಸಾಮಾಜಿಕ ಆಂದೋಲನ ಆರಂಭಿಸಲಾಗುವುದು ಎಂದು ಹೇಳಿದರು.

About the author

ಕನ್ನಡ ಟುಡೆ

Leave a Comment