ರಾಷ್ಟ್ರ ಸುದ್ದಿ

ಗಡಿದಾಟಿ ಬಂದಿದ್ದ ಪಾಕ್ ಎಫ್ 16 ಯುದ್ಧ ವಿಮಾನ ಹೊಡೆದುರುಳಿಸಿದ ಭಾರತೀಯ ಸೇನೆ

ನವದೆಹಲಿ: ಭಾರತದ ಗಡಿ ನಿಯಂತ್ರಣ ರೇಖೆ ಉಲ್ಲಂಘಿಸಿ ಭಾರತದೊಳಗೆ ನುಗ್ಗಿದ್ದ ಪಾಕಿಸ್ತಾನದ ಎಫ್-16 ವಿಮಾನವನ್ನು ಹೊಡೆದುರುಳಿಸಿದ್ದು ಪ್ಯಾರಶೂಟ್ ಬಳಸಿ ಕೆಳಗೆ ಹಾರಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ದಾಳಿ ನಡೆಸಿರುವುದಾಗಿ ಪ್ರಾಥಮಿಕ ವರದಿ ತಿಳಿಸಿದ್ದು ಜಮ್ಮು ಮತ್ತು ಕಾಶ್ಮೀರದಲ್ಲಿ ಎಲ್ಲಾ ನಾಗರಿಕ ವಿಮಾನಗಳ ಹಾರಾಟ ರದ್ದುಗೊಳಿಸಿದೆ ಎಂದು ವರದಿ ಹೇಳಿದೆ. ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಬಳಿಯ ನೌಶೇರ್ ಸೆಕ್ಟರ್ ಬಳಿ ವಾಯುಸೀಮೆಯನ್ನು ಉಲ್ಲಂಘಿಸಿ ಪಾಕಿಸ್ತಾನದ ಮೂರು ಜೆಟ್ ವಿಮಾನಗಳು ದಾಳಿ ನಡೆಸಲು ವಿಫಲ ಪ್ರಯತ್ನ ನಡೆಸಿರುವುದಾಗಿ ಪಿಟಿಐ ವರದಿ ಮಾಡಿದೆ. ಏತನ್ಮಧ್ಯೆ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಗಡಿಯಲ್ಲಿ ಯುದ್ಧ ವಾತಾವರಣ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ದೃಷ್ಠಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಎಲ್ಲಾ ವಿಮಾನ ನಿಲ್ದಾಣ ಸ್ಧಗಿತಗೊಳಿಸಲಾಗಿದ್ದು ನಾಗರಿಕ ವಿಮಾನಗಳ ಹಾರಾಟ ರದ್ದುಗೊಳಿಸಿದ್ದು ಎಲ್ಲಾ ವಿಮಾನಗಳು ದೆಹಲಿಗೆ ವಾಪಸ್ ಆಗಿವೆ ಎಂದು ವರದಿ ಮಾಡಿದೆ.

About the author

ಕನ್ನಡ ಟುಡೆ

Leave a Comment