ರಾಷ್ಟ್ರ ಸುದ್ದಿ

ಗಾಂಧಿ ಜಯಂತಿ: ಸೇವಾಗ್ರಾಮ ಆಶ್ರಮದ ಪ್ರಾರ್ಥನೆಯಲ್ಲಿ ರಾಹುಲ್, ಸೋನಿಯಾ ಭಾಗಿ

ಸೇವಾಗ್ರಾಮ: ಗಾಂಧಿ ಜಯಂತಿ ಪ್ರಯುಕ್ತ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರು ತಮ್ಮ ಕೊನೆಯ ದಿನಗಳನ್ನು ಕಳೆದಿದ್ದ ಮಹಾರಾಷ್ಟ್ರದ ಸೇವಾಗ್ರಾಮದ ಆಶ್ರಮದಲ್ಲಿ ಮಂಗಳವಾರ ನಡೆದ ಪ್ರಾರ್ಥನೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು.
ರಾಹುಲ್ ಗಾಂಧಿ ಅವರು ಸೇವಾಗ್ರಾಮ ಆಶ್ರಮದಲ್ಲಿ 1986ರಲ್ಲಿ ತಮ್ಮ ತಂದೆ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ನೆಟ್ಟಿದ್ದ ಗಿಡದ ಪಕ್ಕದಲ್ಲೇ ಮತ್ತೊಂದು ಸಸಿ ನೆಡುವ ಮೂಲಕ ಗಾಂಧಿ ಜಯಂತಿಯನ್ನು ಆಚರಿಸಿದರು. ಈ ವೇಳೆ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ, ಅಹಮ್ಮದ್ ಪಟೇಲ್ ಅವರು, ನಮ್ಮ ಪಕ್ಷ ಸದ್ಭಾವನಾ ರಾಜಕೀಯ ಮಾಡುತ್ತಿದೆ. ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸುವುದು ನಮಗೆ ಹೊಸದಲ್ಲ. ಆದರೆ ಬಿಜೆಪಿಯವರಿಗೆ ಈಗ ಮಹಾತ್ಮ ಗಾಂಧಿ ಮತ್ತು ಸರ್ದಾಲ್ ಪಟೇಲ್ ನೆನಪಾಗಿದ್ದಾರೆ ಎಂದರು.

About the author

ಕನ್ನಡ ಟುಡೆ

Leave a Comment