ಕ್ರೀಡೆ

ಚಾಂಪಿಯನ್‌ ಕರ್ನಾಟಕಕ್ಕೆ ಕೆಎಎಸ್‌ಸಿಎ ಸನ್ಮಾನ

ಬೆಂಗಳೂರು: ಪ್ರಸಕ್ತ ಸಾಲಿನ ವಿಜಯ… ಹಜಾರೆ ಟ್ರೋಫಿ ಏಕದಿನ ಟೂರ್ನಿಯಲ್ಲಿ ಚಾಂಪಿಯನ್‌ ಪಟ್ಟಕ್ಕೇರಿದ ಕರ್ನಾಟಕ ತಂಡವನ್ನು ರಾಜ್ಯ ಕ್ರಿಕೆಚ್‌ ಸಂಸ್ಥೆ (ಕೆಎಎಸ್‌ಸಿಎ) ವತಿಯಿಂದ ಶುಕ್ರವಾರ ಸನ್ಮಾನಿಸಲಾಯಿತು.

ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ವರ್ಣರಂಜಿತ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಚಾಂಪಿಯನ್‌ ರಾಜ್ಯ ತಂಡವನ್ನು ಸನ್ಮಾನಿಸಲಾಯಿತು. ಅಲ್ಲದೆ ಪ್ರಸಕ್ತ ಸಾಲಿನ ದೇಶೀಯ ಕ್ರಿಕೆಚ್‌ ನಲ್ಲಿ 8 ಶತಕಗಳ ಸಹಿತ 2,232 ರನ್‌ ಕಲೆ ಹಾಕಿ ದಾಖಲೆ ನಿರ್ಮಿಸಿದ ಆರಂಭಿಕ ಬ್ಯಾಟ್ಸ್‌ಮನ್‌ ಮಯಾಂಕ್‌ ಅಗರ್ವಾಲ್‌ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.

ರಣಜಿ ಟ್ರೋಫಿಯಲ್ಲಿ ಸೆಮಿಫೈನಲ್‌ ಸಾಧನೆ, ಸೈಯದ್‌ ಮುಷ್ತಾಕ್‌ ಅಲಿ ಟಿ20 ಟೂರ್ನಿಯಲ್ಲಿ ನಾಕ್‌ಔಚ್‌, ವಿಜಯ… ಹಜಾರೆ ಟ್ರೋಫಿ ಟೂರ್ನಿಯಲ್ಲಿ ಚಾಂಪಿಯನ್‌ ಹಾಗೂ ದೇವಧರ್‌ ಟ್ರೋಫಿಯಲ್ಲಿ ರನ್ನರ್ಸಅಪ್‌ ಸ್ಥಾನ ಪಡೆದ ಕರ್ನಾಟಕ ತಂಡದ ಆಟಗಾರರನ್ನು ಹಾಗೂ ತಂಡದ ಸಹಾಯಕ ಸಿಬ್ಬಂದಿಯನ್ನು ವೈಯಕ್ತಿಕವಾಗಿ ಸಾಂಪ್ರದಾಯಿಕ ಶೈಲಿಯಲ್ಲಿ ಮೈಸೂರು ಪೇಟ ತೊಡಿಸಿ ಗೌರವಿಸಲಾಯಿತು. ಸ್ಟಾರ್‌ ಬ್ಯಾಟ್ಸ… ಮನ್‌ ಮನೀಶ್‌ ಪಾಂಡೆ, ವೇಗಿ ಅಭಿಮನ್ಯು ಮಿಥುನ್‌ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದರು.

ಬಿಸಿಸಿಐ ಹಾಗೂ ಕೆಎಸ್‌ಸಿಎ ಸಂಘಟಿಸುವ ವಿವಿಧ ವಯೋಮಿತಿಯ ಟೂರ್ನಿಗಳಲ್ಲಿ ಪ್ರಶಸ್ತಿ ಗೆದ್ದ ತಂಡಗಳನ್ನು ಹಾಗೂ ವೈಯಕ್ತಿಕ ವಿಭಾಗದಲ್ಲಿ ಉತ್ತಮ ಪ್ರದರ್ಶನ ತೋರಿದ ಆಟಗಾರ/ಆಟಗಾರ್ತಿಯರನ್ನು ಇದೇ ವೇಳೆ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.

About the author

ಕನ್ನಡ ಟುಡೆ

Leave a Comment