ರಾಷ್ಟ್ರ ಸುದ್ದಿ

ಚಾಚಾ ನೆಹರು 129ನೇ ಜನ್ಮದಿನ: ದೇಶದ ಮೊದಲ ಪ್ರಧಾನಿ ಸ್ಮರಿಸಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್

ನವದೆಹಲಿ: ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರು ಅವರು 129ನೇ ಜನ್ಮದಿನ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕರು ಸ್ಮರಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ರಾಷ್ಟ್ರದ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಾಹರ್ ಲಾಲ್ ನೆಹರು ಅವರನ್ನು ಅವರ ಜನ್ಮದಿನದ ಈ ದಿನ ನೆನೆಯುತ್ತಿದ್ದೇವೆ. ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಮತ್ತು ದೇಶದ ಮೊದಲ ಪ್ರಧಾನಿಯಾಗಿ ಅವರು ದೇಶಕ್ಕೆ ನೀಡಿದ ಕೊಡುಗೆಯನ್ನು ಈ ದಿನ ಸ್ಮರಿಸುತ್ತೇವೆಂದು ಹೇಳಿದ್ದಾರೆ. ಇದರಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರೂ ಕೂಡ ನೆಹರು ಅವರನ್ನು ಸ್ಮರಿಸಿದ್ದು, ನಮ್ಮ ದೇಶದ ಮೊದಲ ಪ್ರಧಾನಮಂತ್ರಿಗಳಾದ ನೆಹರು ಅವರ ಜನ್ಮದಿನವಾದ ಇಂದು ಅವರನ್ನು ಸ್ಮರಿಸುತ್ತೇವೆಂದು ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿ, ದೇಶದ ಮೊದಲು ಹಾಗೂ ಸುದೀರ್ಘವಾಗಿ ಆಡಳಿತ ನಡೆಸಿದ್ದ ಪ್ರಧಾನಮಂತ್ರಿ ಪಂಡಿತ್ ಜವಾಹರ್ ಲಾಲ್ ನೆಹರು, ನೆಹರು ಅವರು ತಮ್ಮ ಜೀವನವನ್ನು ದೇಶಕ್ಕಾಗಿ ಮುಡಿಪಾಗಿಟ್ಟಿದ್ದರು. ಬಲವಾದ ಪ್ರಜಾಪ್ರಭುತ್ವಕ್ಕೆ ನೆಹರು ಅವರು ಅಡಿಪಾಯ ಹಾಕಿದ್ದರು. ಇದೀಗ ಅದನ್ನೇ ನಾವು ಆಧುನಿಕ ಪ್ರಜಾಪ್ರಭುತ್ವದ ಆಕಾರವನ್ನು ನೀಡಿದ್ದೇವೆ. ಇಂದು ಧೀಮಂತ ನಾಯಕನಿಗೆ ಗೌರವ ಸಲ್ಲಿಸುವ ದಿನ, ನೆಹರು ಅವರನ್ನು ಸ್ಮರಿಸುವ ದಿನ ಎಂದು ಹೇಳಿದೆ.

About the author

ಕನ್ನಡ ಟುಡೆ

Leave a Comment