ಕ್ರೀಡೆ

ಚೆಂಡು ವಿರೂಪಗೊಳಿಸಿದ ಪ್ರಕರಣ ಸ್ಮಿತ್  ಮತ್ತು ವಾರ್ನರ್ ಗೆ 12 ತಿಂಗಳು ಆಟದಿಂದ ನಿಷೇಧ

ಸಿಡ್ನಿ: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಚೆಂಡನ್ನು ವಿರೂಪಗೊಳಿಸದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕ ಸ್ಟೀವ್ ಸ್ಮಿತ್ ಹಾಗೂ ಉಪನಾಯಕ ಡೇವಿಡ್ ವಾರ್ನರ್ 12 ತಿಂಗಳ ನಿಷೇದ ಶಿಕ್ಷೆ ನೀಡುವ ಕುರಿತು ಕ್ರಿಕೆಟ್ ಆಸ್ಟ್ರೇಲಿಯಾ ಮುಂದಾಗಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಚೆಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಟ್ರೇಲಿಯಾ ಮಾಜಿ ನಾಯಕನ ವಿರುದ್ಧ ಕೆಂಡಾಮಂಡಲವಾಗಿರುವ ಕ್ರಿಕೆಟ್ ಆಸ್ಟ್ರೇಲಿಯಾ ಸ್ಮಿತ್ ಗೆ ಆಜೀವ ನಿಷೇಧವನ್ನು ಹೇರಲು ಮುಂದಾಗಿತ್ತಾದರೂ ಹಿರಿಯ ಮಾಜಿ ಕ್ರಿಕೆಟಿಗರ ಸಲಹೆ ಮೇರೆಗೆ ಸ್ಮಿತ್ ಗೆ ಒಂದು ವರ್ಷ ನಿಷೇಧ ಹೇರಲು ನಿರ್ಧರಿಸಿದೆ ಎನ್ನಲಾಗಿದೆ. ಅಲ್ಲದೆ ಉಪನಾಯಕ ಡೇವಿಡ್ ವಾರ್ನರ್ ಗೂ ಇದೇ ಶಿಕ್ಷೆ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

 

About the author

ಕನ್ನಡ ಟುಡೆ

Leave a Comment