ರಾಷ್ಟ್ರ ಸುದ್ದಿ

ಛತ್ತೀಸ್ಗಢದ ಕಂಕೆರ್ ಜಿಲ್ಲೆಯಲ್ಲಿ ನಕ್ಸಲರಿಂದ ಐಇಡಿ ಸ್ಫೋಟ, 2 ಯೋಧರಿಗೆ ಗಂಭೀರ ಗಾಯ

ರಾಯಪುರ: ಛತ್ತೀಸ್ಗಢದ ಕಂಕೆರ್ ಜಿಲ್ಲೆಯಲ್ಲಿ ನಕ್ಸಲರು ಐಇಡಿ ಸ್ಫೋಟಿಸಿದ್ದು, ಘಟನೆಯಲ್ಲಿ ಇಬ್ಬರು ಗಡಿ ಭದ್ರತಾ ಪಡೆಯ ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.
ಕೊಯಾಲಿಬೆಡ ಪೊಲೀಸ್ ಠಾಣೆಯ ಅರಣ್ಯ ಪ್ರದೇಶದಲ್ಲಿ ಬಿಎಸ್ಎಫ್ 35 ಬೆಟಾಲಿಯನ್ ಪಡೆಗಳು ಕಾರ್ಯಾಚರಣೆ ನಡೆಸಲುವ ಸಲುವಾಗಿ ಬರುತ್ತಿದ್ದವು. ಈ ವೇಳೆ ನಕ್ಸಲರು ಐಇಡಿ ಸ್ಫೋಟಿಸಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ. ಘಟನೆಯಲ್ಲಿ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಪ್ರಸ್ತುತ ಸ್ಥಳದಲ್ಲಿ ಯೋಧರು ಕಾರ್ಯಾಚರಣೆ ನಡೆಸುತ್ತಿದ್ದು, ಮೂಲಗಳ ಪ್ರಕಾರ ನಕ್ಸಲ್ ನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ. ಅ.30 ರಂದು ಛತ್ತೀಸ್ಗಢದ ದಂತೇವಾಡದಲ್ಲಿ ನಕ್ಸಲರು ಭೀಕರ ದಾಳಿ ನಡೆಸಿದ್ದರು. ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿ, ದೂರದರ್ಶನದ ಕ್ಯಾಮೆರಾಮೆನ್ ಒಬ್ಬ ಮೃತಪಟ್ಟಿದ್ದ.

About the author

ಕನ್ನಡ ಟುಡೆ

Leave a Comment