ರಾಷ್ಟ್ರ ಸುದ್ದಿ

ಛತ್ತೀಸ್ ಗಢ: ಎನ್ ಕೌಂಟರ್ ನಲ್ಲಿ ನಾಲ್ವರು ನಕ್ಸಲೀಯರ ಹತ್ಯೆಗೈದ ಭದ್ರತಾ ಪಡೆ

ಸುಕ್ಮಾ: ಛತ್ತೀಸ್ ಗಢ ರಾಜ್ಯದ ಸುಕ್ಮಾ ಜಿಲ್ಲೆಯಲ್ಲಿ ಇಂದು ಮುಂಜಾನೆ ನಡೆದ ಎನ್ ಕೌಂಟರ್ ನಲ್ಲಿ ಭದ್ರತಾ ಪಡೆಗಳು ನಾಲ್ವರು ನಕ್ಸಲೀಯರನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಚಿಂತಾಲ್ನಾರು ಪೊಲೀಸ್ ಠಾಣೆಯ ವ್ಯಾಪ್ತಿಯ ಅರಣ್ಯದಲ್ಲಿ ಬೆಳಗ್ಗೆ 6 ಗಂಟೆ ಸುಮಾರಿನಲ್ಲಿ ಈ ಎನ್ ಕೌಂಟರ್ ನಡೆದಿದೆ ಎಂದು ನಕ್ಸಲ್ ವಿರೋಧಿ ಕಾರ್ಯಾಚರಣೆ ವಿಭಾಗದ ಉಪ ಪೊಲೀಸ್ ಮಹಾನಿರ್ದೇಶಕ ಪಿ. ಸುಂದರ್ ರಾಜ್  ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ. 

ಛತ್ತೀಸ್ ಗಢ ರಾಜಧಾನಿಯಿಂದ 500 ಕಿಲೋ ಮೀಟರ್ ದೂರದಲ್ಲಿರುವ ಕರ್ಕಾಂಗುಡಾ ಹಳ್ಳಿಯಲ್ಲಿ ಸಿಆರ್ ಪಿಎಫ್ ಕಮಾಂಡೋ ಬೆಟಲಿಯನ್ ಶೋಧ ಕಾರ್ಯಾಚರಣೆ ನಡೆಸುತ್ತಿರುವಾಗ ನಕ್ಸಲೀಯರು ಗುಂಡಿನ ದಾಳಿ ನಡೆಸಿದ್ದಾಗ ಪ್ರತಿದಾಳಿ ನಡೆಸಲಾಯಿತು ಎಂದು ಅವರು ಹೇಳಿದ್ದಾರೆ.ಕಾರ್ಯಾಚರಣೆ ನಡೆದ ಪ್ರದೇಶದಲ್ಲಿ ಒಂದು ಐಎನ್ ಎಸ್ ಎಎಸ್ ರೈಪಲ್ ಮತ್ತು ಎರಡು 303 ರೈಪಲ್ಸ್ ಗಳನ್ನು ವಶಪಡಿಸಿಕೊಂಡಿರುವುದಾಗಿ ಸುಂದರ್ ರಾಜ್ ತಿಳಿಸಿದ್ದಾರೆ.

About the author

ಕನ್ನಡ ಟುಡೆ

Leave a Comment