ರಾಜಕೀಯ

ಜನರನ್ನು ನಿಯಂತ್ರಿಸಲು ನಗರದಿಂದ ದೂರ ಉಳಿಯುತ್ತಿದ್ದಾರೆ ಸಿಎಂ ಕುಮಾರಸ್ವಾಮಿ: ಬಿ.ಎಸ್.ಯಡಿಯೂರಪ್ಪ

ಬೆಳಗಾವಿ: ಸಮಸ್ಯೆ ಹೇಳಿಕೊಂಡು ಬರುವ ಜನರನ್ನು ನಿಯಂತ್ರಿಸುವ ಸಲುವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನಗರದಿಂದ ದೂರ ಉಳಿಯುತ್ತಿದ್ದಾರೆಂದು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ.
ನಿನ್ನೆ ನಡೆದ ಚಳಿಗಾಲ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಹೋಟೆಲ್ ವಾಸ್ತವ್ಯದ ಬಗ್ಗೆ ಚರ್ಚೆ ನಡೆದ ಸಂದರ್ಭದಲ್ಲಿ ಕುಮಾರಸ್ವಾಮಿಯವರ ವಿರುದ್ಧ ಯಡಿಯೂರಪ್ಪ ವಾಗ್ದಾಳಿ ನಡೆಸಿದರು. ಸರ್ಕಾರಿ ಬಂಗಲೆಯಿಂದ ಒಬ್ಬ ಮುಖ್ಯಮಂತ್ರಿ ನಗರದಿಂದ 12 ಕಿ.ಮೀ ದೂರದಲ್ಲಿ ಉಳಿದುಕೊಳ್ಳುವುದಾದರೂ ಹೇಗೆ? ಶಾಸಕರನ್ನು ಭೇಟಿ ಮಾಡಿ ಅಧಿವೇಶನದ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿಗಳಿಗೆ ಇಷ್ಟವಿಲ್ಲ ಎಂಬುದು ಇದರಿಂದ ಅರ್ಥವಾಗುತ್ತದೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಸಮಸ್ಯೆ ಹೇಳಿಕೊಳ್ಳಲು ಬರುವ ಜನರನ್ನು ಕುಮಾರಸ್ವಾಮಿಯವರು ನಿಯಂತ್ರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

About the author

ಕನ್ನಡ ಟುಡೆ

Leave a Comment