ರಾಜಕೀಯ

ಜನಾರ್ದನ ರೆಡ್ಡಿಗೂ ನಮಗೂ ಸಂಬಂಧವಿಲ್ಲ ಎಂಬ ಶಾ ಹೇಳಿಕೆ: ರೆಡ್ಡಿಗೆ ರಾಜ್ಯ ಬಿಜೆಪಿ ನಾಯಕರ ಸಮಾಧಾನ?

ಬೆಂಗಳೂರು: ಅಮಿತ್ ಶಾ ಹೇಳಿಕೆಯಿಂದ ಅಸಮಾಧಾನಗೊಂಡಿರುವ ಬಳ್ಳಾರಿ ಗಣಿದಣಿ ಗಾಲಿ ಜನಾರ್ಧನ ರೆಡ್ಡಿ ಅವರನ್ನು ಸಮಾಧಾನಗೊಳಿಸಲು ರಾಜ್ಯ ಬಿಜೆಪಿ ನಾಯಕರು ಮುಂದಾಗಿದ್ದಾರೆ.
ಪಕ್ಷದಲ್ಲಿರುವ ರೆಡ್ಡಿ ನಿಷ್ಠರಿಗೆ ಅಮಿತ್ ಶಾ ಹೇಳಿಕೆಯಿಂದ ಆಘಾತವಾಗಿದೆ ಜೊತೆಗೆ ಅಸಮಾಧಾನದ ಹೊಗೆಯೂ ಎದ್ದಿದೆ. ಬಿಜೆಪಿಯ ಬಳ್ಳಾರಿ ಸಂಸದ ಶ್ರೀರಾಮುಲು ಸೇರಿದಂತೆ ಹಲವರು ಅಮಿತ್ ಶಾ ಹೇಳಿಕೆಗೆ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. 2008 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಬಳ್ಳಾರಿಯ ರೆಡ್ಡಿ ಸಹೋದರರು ಹಾಗೂ ಬಿ. ಶ್ರೀರಾಮುಲು ಪ್ರಮುಖ ಪಾತ್ರ ವಹಿಸಿದ್ದರು. ಇನ್ನೂ ಈ ಸಂಬಂಧ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಪಕ್ಷದ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

About the author

ಕನ್ನಡ ಟುಡೆ

Leave a Comment