ರಾಷ್ಟ್ರ ಸುದ್ದಿ

ಜಮ್ಮು-ಕಾಶ್ಮೀರದಲ್ಲಿ ಭೀಕರ ಅಪಘಾತ: ಕಂದಕಕ್ಕೆ ಉರುಳಿಬಿದ್ದ ಬಸ್ 11 ಸಾವು, ಹಲವರಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಸಾರ್ವಜನಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ವೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 11 ಮಂದಿ ಸಾವನ್ನಪ್ಪಿ, ಹಲವರಿಗೆ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಿಂದ 175 ಕಿ.ಮೀ ದೂರದಲ್ಲಿರುವ ಲೋರನ್ ಎಂಬ ಪ್ರದೇಶದಲ್ಲಿ ದುರ್ಘಟನೆ ಸಂಭವಿಸಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಭದ್ರತಾ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

About the author

ಕನ್ನಡ ಟುಡೆ

Leave a Comment