ರಾಷ್ಟ್ರ ಸುದ್ದಿ

ಜಮ್ಮು-ಕಾಶ್ಮೀರ: ಕಂದಕಕ್ಕೆ ಉರುಳಿಬಿದ್ದ ಬಸ್, 15 ಜನರ ಸಾವು

ಶ್ರೀನಗರ: ಜಮ್ಮುವಿನ ಶ್ರೀನಗರದಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಿನಿ ಬಸ್ ವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 15 ಮಂದಿ ಸಾವನ್ನಪ್ಪಿ, 19 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಕೆಲ ಮೊತ್ ಬಳಿ ಅಪಘಾತ ಸಂಭವಿಸಿದ್ದು, ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. 8 ಗಾಯಾಳುಗಳನ್ನು ಹೆಲಿಕಾಪ್ಟರ್ ಗಳ ಮೂಲಕ ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 35ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತಿದ್ದ ಮಿನಿ ಬಸ್ ಬಿನಿಹಾಲ್ ನಿಂದ ರಂಬಾನಿಗೆ ತೆರಳುತ್ತಿತ್ತು. ಈ ವೇಳೆ ದುರ್ಘಟನೆ ಸಂಭವಿಸಿದೆ.

About the author

ಕನ್ನಡ ಟುಡೆ

Leave a Comment