ರಾಷ್ಟ್ರ ಸುದ್ದಿ

ಜಮ್ಮು ಬಸ್ ನಿಲ್ದಾಣದಲ್ಲಿ ಗ್ರೆನೇಡ್ ಸ್ಫೋಟ: 18 ಕ್ಕೂ ಹೆಚ್ಚು ಜನರಿಗೆ ಗಾಯ, ಉಗ್ರರಿಗಾಗಿ ಪೊಲೀಸರಿಂದ ಶೋಧ

ಜಮ್ಮು: ಬಸ್ ನಿಲ್ದಾಣದ ಒಳಗಡೆಯೇ ಸ್ಫೋಟ ಸಂಭವಿಸಿದ್ದು, 18 ಕ್ಕೂ ಹೆಚ್ಚು ಜನರುಗಾಯಗೊಂಡಿರುವ ಘಟನೆ ಜಮ್ಮುವಿನಲ್ಲಿ ನಡೆದಿದೆ. ಬಸ್ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ ಎಂದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ. ಘಟನೆ ಬಗ್ಗೆ ಮಾಹಿತಿ ನೀಡಿರುವ ಜಮ್ಮು ಐಜಿಪಿ ಎಂಕೆ ಸಿನ್ಹಾ, ಸ್ಫೋಟಗೊಂಡಿರುವುದು ಗ್ರೆನೇಡ್ ಎಂಬುದನ್ನು ಖಚಿತಪಡಿಸಿದ್ದು 18 ಕ್ಕೂ ಹೆಚ್ಚು ಜನರು ಘಟನೆಯಲ್ಲಿ ಗಾಯಗೊಂಡಿದ್ದಾರೆ ಅವರಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಪೊಲೀಸರು, ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಘಟನಾ ಸ್ಥಳವನ್ನು ಸಂಪೂರ್ಣ ಸುತ್ತುವರೆದು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇತ್ತೀಚಿನ ವರದಿಯ ಪ್ರಕಾರ ಘಟನಾ ಸ್ಥಳದಿಂದ ಓರ್ವ ಉಗ್ರ ಪರಾರಿಯಾಗಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.  ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

About the author

ಕನ್ನಡ ಟುಡೆ

Leave a Comment