ರಾಷ್ಟ್ರ ಸುದ್ದಿ

ಜಮ್ಮು ಮತ್ತು ಕಾಶ್ಮೀರ: ಕಣಿವೆಗೆ ಉರುಳಿದ ಸೇನಾ ವಾಹನ, ಓರ್ವ ಸೈನಿಕನ ಸಾವು, 34 ಸೈನಿಕರಿಗೆ ಗಾಯ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ವಾಹನವೊಂದು ಕಣಿವೆಗೆ ಉರುಳಿದ ಪರಿಣಾಮ ಓರ್ವ ಯೋಧ ಸಾವನ್ನಪ್ಪಿ, 34 ಮಂದಿ ಸೈನಿಕರು ಗಾಯಗೊಂಡಿದ್ದಾರೆ.
ಕಾಶ್ಮೀರದ ರಂಬಾನ್ ಜಿಲ್ಲೆಯ ಖೂನಿ ನಲ್ಲಾಹ್ ಪ್ರಾಂತ್ಯದ ಜಮ್ಮು ಮತ್ತು ಶ್ರೀನಗರ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಬಸ್ ಕಣಿವೆಗೆ ಉರುಳಿದೆ. ಪರಿಣಾಮ ವಾಹನದಲ್ಲಿದ್ದ ಸುಮಾರು 34 ಮಂದಿ ಗಾಯಗೊಂಡಿದ್ದು ಓರ್ವ ಯೋಧ ಸೈನಿಕ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದ ಯೋಧನನ್ನು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಅಧಿಕಾರಿ ಎಂದು ಹೇಳಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಸಮೀಪದ ಸೇನಾ ಕ್ಯಾಂಪ್ ನಿಂದ ಸೈನಿಕರು ರಕ್ಷಣಾ ಕಾರ್ಯಾಚರಣೆಗೆ ತೆರಳಿದ್ದು, ಘಟನಾ ಪ್ರದೇಶದಿಂದ 34 ಮಂದಿ ಗಾಯಾಳುಗಳನ್ನೂ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಅಪಘಾತಕ್ಕೆ ಹೆದ್ದಾರಿಯಲ್ಲಿ ವಾಹನ ಸ್ಕಿಡ್ ಆಗಿ ಚಾಲಕ ನಿಯಂತ್ರಣ ತಪ್ಪಿದ್ದೇ ಕಾರಣ ಎನ್ನಲಾಗಿದೆ.

About the author

ಕನ್ನಡ ಟುಡೆ

Leave a Comment