ರಾಷ್ಟ್ರ ಸುದ್ದಿ

ಜಮ್ಮು ಮತ್ತು ಕಾಶ್ಮೀರ: ಪಾಕ್ ನಿಂದ ರಾಕೇಟ್ ದಾಳಿ, ಕದನ ವಿರಾಮ ಉಲ್ಲಂಘನೆ

ಶ್ರೀನಗರ: ಪಾಕಿಸ್ತಾನ ಸೇನೆ ಮಂಗಳವಾರ ಕದನ ವಿರಾಮ ಉಲ್ಲಂಘಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ರಾಕೆಟ್ ಲಾಂಚರ್ಸ್ ನಿಂದ ಎರಡು ಸುತ್ತು ಗುಂಡು ಹಾರಿಸಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ನಾಗರಿಕರ ಸುರಕ್ಷತೆ ದೃಷ್ಟಿಯಿಂದ ಭಾರತೀಯ ಯೋಧರು, ಪಾಕ್ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಹೆಸರು ಹೇಳಲು ಇಚ್ಚಿಸಿದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಂದು ಬೆಳಗ್ಗೆ 10.30ರ ಸುಮಾರಿಗೆ ಕೃಷ್ಣ ಘಾಟಿ ಸೆಕ್ಟರ್ ನ ಸೇನಾ ಕ್ಯಾಂಪ್ ಗುರಿಯಾಗಿಸಿಕೊಂಡು ರಾಕೇಟ್ ದಾಳಿ ನಡೆಸಲಾಗಿದೆ. ಆದರೆ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಅವರು ಹೇಳಿದ್ದಾರೆ. ಹೊಸ ವರ್ಷ ಆರಂಭವಾದಾಗಿನಿಂದಲೂ ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸುತ್ತಿದ್ದು, ಜನವರಿ 1ರಂದು ಪೂಂಚ್ ಸೆಕ್ಟರ್ ನಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು.

About the author

ಕನ್ನಡ ಟುಡೆ

Leave a Comment