ರಾಷ್ಟ್ರ ಸುದ್ದಿ

ಜಾರ್ಖಂಡ್ ನಲ್ಲಿ ಎನ್ಕೌಂಟರ್; 3 ನಕ್ಸಲರು ಹತ, ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮ

ರಾಂಚಿ: ಜಾರ್ಖಂಡ್ ನಲ್ಲಿ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಭೀಕರ್ ಎನ್ ಕೌಂಟರ್ ನಡೆದಿದ್ದು, ಘಟನೆಯಲ್ಲಿ ಮೂವರು ನಕ್ಸಲರು ಹತರಾಗಿದ್ದು, ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮನಾಗಿದ್ದಾನೆ ಎಂದು ತಿಳಿದುಬಂದಿದೆ. ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನಕ್ಕೆ ಇನ್ನು ಕೇವಲ 2 ದಿನ ಬಾಕಿ ಇರುವಂತೆಯೇ ಅತ್ತ ಜಾರ್ಖಂಡ್ ನಲ್ಲಿ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಭೀಕರ ಗುಂಡಿನ ಕಾಳಗ ನಡೆದಿದೆ. ಜಾರ್ಖಂಡ್ ನ ಗಿರಿಧ್ ಜಿಲ್ಲೆಯ ಬೆಲ್ಭಾ ಘಾಟ್ ಪ್ರದೇಶದಲ್ಲಿ ಇಂದು ಮುಂಜಾನೆ 6 ಗಂಟೆ ಸುಮಾರಿನಲ್ಲಿ ಎನ್ ಕೌಂಟರ್ ನಡೆದಿದ್ದು, ಘಟನೆಯಲ್ಲಿ ಮೂವರು ನಕ್ಸಲರು ಹತರಾಗಿದ್ದು, ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮನಾಗಿದ್ದಾನೆ ಎಂದು ತಿಳಿದುಬಂದಿದೆ. ಬೆಲ್ಭಾ ಘಾಟ್ ಪ್ರದೇಶದ ದಟ್ಟಾರಣ್ಯದಲ್ಲಿ ನಕ್ಸಲರು ಅಡಗಿರುವ ಕುರಿತು ಮಾಹಿತಿ ಪಡೆದ ಸಿಆರ್ ಪಿಎಫ್ ನ 7ನೇ ಬೆಟಾಲಿಯನ್ ಪಡೆ ಕೂಡಲೇ ಸ್ಥಳಕ್ಕೆ ದೌಡಾಯಿಸಿದೆ. ಈ ವೇಳೆ ಸೈನಿಕರನ್ನು ಕಂಡ ನಕ್ಸಲರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಸೇನೆ ನಡೆಸಿದ ಪ್ರತಿದಾಳಿಯವ್ವಿ ಮೂವರು ನಕ್ಸಲರು ಹತರಾಗಿದ್ದಾರೆ. ಇನ್ನು ಘಟನೆಯಲ್ಲಿ ಓರ್ವ  ಸಿಆರ್ ಪಿಎಫ್ ಯೋಧ ಹುತಾತ್ಮನಾಗಿದ್ದಾನೆ ಎಂದು ಸೇನಾ ಮೂಲಗಳು ತಿಳಿಸಿವೆ. ಇನ್ನು ಘಟನಾ ಪ್ರದೇಶದಲ್ಲಿ ಸೇನಾಪಡೆಗಳು, ಮೂವರು ನಕ್ಸಲರ ಶವಗಳನ್ನು ವಶಪಡಿಸಿಕೊಂಡಿದ್ದು, ಈ ವೇಳೆ ಎಕೆ 47 ರೈಫಲ್ ಗಳು, ಮೂರು ಬುಲೆಟ್ ಮ್ಯಾಗಜಿನ್ ಗಳು, 4 ಪೈಪ್ ಬಾಂಬ್ ಗಳು ಸೇರಿದಂತೆ ಹಲವು ಸ್ಫೋಟಕಗಳನ್ನು ವಶಕ್ಕೆ ಪಡೆದಿದ್ದಾರೆ. ಘಟನಾ ಪ್ರದೇಶದಲ್ಲಿ ಈಗಲೂ ಎನ್ಕೌಂಟರ್ ಸಾಗಿದ್ದು, ಪರಾರಿಯಾದ ನಕ್ಸಲರಿಗಾಗಿ ಸೇನೆ ತೀವ್ರ ಶೋಧ ನಡೆಸುತ್ತಿದೆ.

About the author

ಕನ್ನಡ ಟುಡೆ

Leave a Comment