ರಾಜಕೀಯ

ಜಿದ್ದಾಜಿದ್ದಿನ ರಣರಂಗವಾಗಿದೆ ಚಾಮುಂಡೇಶ್ವರಿ-ವರುಣಾ : ಕಾಂಗ್ರೆಸ್ ಸೋಲಿಸಲು ಜೆಡಿಎಸ್ -ಬಿಜೆಪಿ ಪಣ!

ಮೈಸೂರು:  ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಚುನಾವಣಾ ಕಾವು ರಂಗೇರುತ್ತಿದೆ.  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ವರುಣಾ ಕ್ಷೇತ್ರದಲ್ಲಿ ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ದಿಸುತ್ತಿದ್ದಾರೆ. ಯತೀಂದ್ರ ವಿರುದ್ಧ ಬಿಜೆಪಿ  ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ವಿಜಯೆಂದ್ರ ಅವರನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಲಾಗುತ್ತಿದೆ, ಹೀಗಾಗಿ ವರುಣಾ ಕ್ಷೇತ್ರದಲ್ಲಿ ಭಾರಿ ಹಣಾಹಣಿ ನಡೆಯಲಿದೆ. ಕಾಂಗ್ರೆಸ್ ಸೋಲಿಸಲು ಬಿಜೆಪಿ ಮತ್ತು ಜೆಡಿಎಸ್  ತಂತ್ರ ರೂಪಿಸುತ್ತಿದ್ದಾರೆ.
ಸಿಎಂ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದರ ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವುದರಿಂದ ಈ ಕ್ಷೇತ್ರಗಳ ಚುನಾವಣೆ ಮತ್ತಷ್ಟು ಮಹತ್ವ ಪಡೆದುಕೊಂಡಿದೆ, ತಮ್ಮ ಪುತ್ರನಿಗೆ ವರುಣಾ ಕ್ಷೇತ್ರ ಬಿಟ್ಟುಕೊಟ್ಟಿರುವ ಸಿದ್ದರಾಮಯ್ಯ ಚಾಮುಂಡೇಶ್ವರಿಯಿಂದ ಸ್ಪರ್ಧಿಸಿಲಿದ್ದಾರೆ.

About the author

ಕನ್ನಡ ಟುಡೆ

Leave a Comment