ರಾಜ್ಯ ಸುದ್ದಿ

ಜೆಎಂಬಿ ಉಗ್ರರಿಂದ ಬೌದ್ಧ ಧರ್ಮಗುರು ದಲೈಲಾಮಾ ಹತ್ಯೆಗೆ ಸಂಚು

ಬೆಂಗಳೂರು: ಬೌದ್ಧ ಧರ್ಮಗುರು ದಲೈಲಾಮಾ ಹತ್ಯೆಗೆ ಜೆಎಂಬಿ (ಜಮಾತ್-ಉಲ್-ಮುಜಾಹಿದೀನ್ ಬಾಂಗ್ಲಾದೇಶ) ಸಂಘಟನೆಯ ಉಗ್ರರು ಸಂಚು ರೂಪಿಸಿದ್ದರು ಎಂಬ ಭಯಾನಕ ಮಾಹಿತಿ ಹೊರಬಿದ್ದಿದೆ. ದಲೈಲಾಮಾರನ್ನ ಬಾಂಬ್​ ಸ್ಫೋಟಿಸಿ ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂಬ ಮಾಹಿತಿ ಬಂಧಿತ ಉಗ್ರರ ವಿಚಾರಣೆ ವೇಳೆ ತಿಳಿದುಬಂದಿದೆ. ಉಗ್ರರು 2018ರ ಆರಂಭದಲ್ಲಿ ಸ್ಫೋಟಕ್ಕೆ ಸಂಚು ರೂಪಿಸಿದ್ದರು. ರಾಮನಗರದಲ್ಲಿ ಹತ್ಯೆಗೆ ಸ್ಕೆಚ್‌ ನಡೆದಿತ್ತು.

ರಾಮನಗರದಲ್ಲಿ ಬಂಧಿತನಾಗಿದ್ದ ಉಗ್ರ ಮುನೀರ್ ಶೇಖ್ ವಿಚಾರಣೆ ವೇಳೆ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾನೆ. ಬೌದ್ಧ ಧರ್ಮಗುರು ದಲೈಲಾಮಾ ಅವರು ರೋಹಿಂಗ್ಯಾಗಳಿಗೆ ವಿರೋಧಿಯಾಗಿದ್ದರು. ರೋಹಿಂಗ್ಯಾಗಳಿಗೆ ವಿರೋಧಿಯಾಗಿದ್ದರಿಂದ ಜೆಎಂಬಿ ಉಗ್ರ ಸಂಘಟನೆ ಹತ್ಯೆಗೆ ಸಂಚು ರೂಪಿಸಿತ್ತು ಎಂಬ ಮಾಹಿತಿಯನ್ನು ಬಾಯ್ಬಿಟ್ಟಿದ್ದಾನೆ.

About the author

ಕನ್ನಡ ಟುಡೆ

Leave a Comment