ರಾಜ್ಯ ಸುದ್ದಿ

ಜೆಡಿಎಸ್​ ಮಾಜಿ ಶಾಸಕ ಎಚ್​.ಎಸ್​.ಪ್ರಕಾಶ್​ ವಿಧಿವಶ

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಜೆಡಿಎಸ್​ ಮಾಜಿ ಶಾಸಕ ಎಚ್​.ಎಸ್​.ಪ್ರಕಾಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ನಗರದ ಬಿಜಿಎಸ್​ ಆಸ್ಪತ್ರೆಯಲ್ಲಿ ಮಂಗಳವಾರ ಕೊನೆಯುಸಿರೆಳೆದಿದ್ದಾರೆ.

ಪ್ರಕಾಶ್​ ಅವರು ಕಳೆದ ಕೆಲವು ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಅವರನ್ನು ಕೆಂಗೇರಿಯ ಬಿಜಿಎಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.

ಪ್ರಕಾಶ್​ ಅವರು ನಾಲ್ಕು ಬಾರಿ ಹಾಸನ ಕ್ಷೇತ್ರದ ಶಾಸಕರಾಗಿದ್ದರು. ದೇವೇಗೌಡರಿಗೆ ಆಪ್ತರಾಗಿದ್ದರು. ಹಾಸನದಲ್ಲಿ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

 

About the author

ಕನ್ನಡ ಟುಡೆ

Leave a Comment