ರಾಜ್ಯ ಸುದ್ದಿ

ಜೆಡಿಎಸ್‌ ರಾಜ್ಯಾಧ್ಯಕ್ಷ ಹುದ್ದೆ ತ್ಯಜಿಸಲು ವಿಶ್ವನಾಥ್‌ ಇಂಗಿತ

ಬೆಂಗಳೂರು: ಹೆಚ್ಚಿನ ಓಡಾಟ ನಡೆಸದೆ ವಿಶ್ರಾಂತಿ ತೆಗೆದುಕೊಳ್ಳಬೇಕೆಂಬ ವೈದ್ಯರ ಸಲಹೆ ಹಿನ್ನೆಲೆಯಲ್ಲಿ ಎಚ್‌.ವಿಶ್ವನಾಥ್‌ ಅವರು ಜೆಡಿಎಸ್‌ ರಾಜ್ಯಾಧ್ಯಕ್ಷ ಹುದ್ದೆ ತ್ಯಜಿಸಲು ಮುಂದಾಗಿದ್ಧಾರೆ. ಲೋಕಸಭಾ ಚುನಾವಣೆ ತಯಾರಿ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡರು ಜನವರಿ 3 ರಂದು ಪಕ್ಷದ ಕಚೇರಿಯಲ್ಲಿ ಕರೆದಿರುವ ಶಾಸಕರು, ಸಂಸದರು, ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಸೇರಿದಂತೆ ಪಕ್ಷದ ಪ್ರಮುಖ ಸಭೆ ಬಳಿಕ ದೇವೇಗೌಡರನ್ನು ಭೇಟಿಯಾಗಿ ರಾಜ್ಯಾಧ್ಯಕ್ಷ ಸ್ಥಾನದಿಂದ ತಮ್ಮನ್ನು ಬಿಡುಗಡೆ ಮಾಡಬೇಕೆಂದು ಮನವಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ.

ಈ ಸಂಬಂಧ ‘ವಿಕ’ ಜತೆ ಮಾತನಾಡಿದ ವಿಶ್ವನಾಥ್‌ ಅವರು, ನನ್ನ ಮೇಲೆ ರಾಷ್ಟ್ರೀಯ ಅಧ್ಯಕ್ಷರು ಅಪಾರ ನಿರೀಕ್ಷೆ ಹಾಗೂ ವಿಶ್ವಾಸವಿಟ್ಟು ಹುದ್ದೆ ನೀಡಿದ್ದಾರೆ. ಆದರೆ ಅವರ ನಿರೀಕ್ಷೆಗೆ ತಕ್ಕಂತೆ ಹುದ್ದೆಗೆ ನ್ಯಾಯ ಕೊಡಲು ಆಗುತ್ತಿಲ್ಲ. ನನ್ನನ್ನು ಗೆಲ್ಲಿಸಿದ ಹುಣಸೂರು ಮತದಾರರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಲು ಆಗುತ್ತಿಲ್ಲ. ಹೀಗಾಗಿ ಏಕ ಕಾಲದಲ್ಲಿ ಪಕ್ಷದ ಹುದ್ದೆ ಹಾಗೂ ಕ್ಷೇತ್ರದ ಕಡೆ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ. ಜತೆಗೆ ವೈದ್ಯರು ಸಹ ವಿಶ್ರಾಂತಿಗೆ ಸಲಹೆ ನೀಡಿರುವುದರಿಂದ ರಾಜ್ಯಾಧ್ಯಕ್ಷ ಹುದ್ದೆ ತ್ಯಜಿಸಲು ಮುಂದಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಅಸಮಾಧಾನವಿಲ್ಲ
 : ನನಗೆ ಯಾವ ಅಸಮಾಧಾನವೂ ಇಲ್ಲ. ಬಹಳ ಸಮಾಧಾನದಿಂದ ಇದ್ದೇನೆ. ನಾನು ಸಹ ಜೆಡಿಎಸ್‌ ಪಕ್ಷ, ದೇವೇಗೌಡರು ಹಾಗೂ ಕುಮಾರಸ್ವಾಮಿಗೆ ಸದಾ ಋುಣಿಯಾಗಿರುತ್ತೇನೆ. ನನ್ನನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಂಡಿದ್ಧಾರೆ. ನನ್ನ ಕೊನೆಯ ಉಸಿರು ಇರುವ ತನಕ ಅವರ ಜತೆ ಇರುತ್ತೇನೆ.

About the author

ಕನ್ನಡ ಟುಡೆ

Leave a Comment