ಸಿನಿ ಸಮಾಚಾರ

ಜೆಡಿಎಸ್ ಗೆ ಮತನೀಡಿ ಎಂದ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್

ಬೆಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿದಂತೆ ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ತಾರಕಕ್ಕೇರಿದ್ದು ಇದಕ್ಕೆ ಹೊಸ ಸೇರ್ಪಡೆ ಎಂಬಂತೆ ಇದೀಗ ಸ್ಯಾಂಡಲ್ ವುಡ್ ನ ನಟ-ನಟಿಯರೂ ಕೂಡ ರಾಜಕೀಯ ಪಕ್ಷಗಳ ಪರ ಹೋರಾಟ ಮಾಡುತ್ತಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ಎಂಬಂತೆ ಸ್ಯಾಂಡಲ್ ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಪರ ಪ್ರಚಾರ ನಡೆಸಿದ್ದಾರೆ. ಮತದಾನದ ಮಹತ್ವದ ಕುರಿತ ವಿಡಿಯೋವೊಂದರಲ್ಲಿ ಮಾತನಾಡಿರುವ ನಟಿ ರಚಿತಾ ರಾಮ್ ಕರ್ನಾಟಕ ರಾಜ್ಯ ಅಭಿವೃದ್ಧಿ ಕಡೆ ನಡೆಯಲು ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಿ ಎಂದು ಮನವಿ ಮಾಡಿದ್ದಾರೆ.

“ಕರ್ನಾಟಕ ರಾಜ್ಯ ಅಭಿವೃದ್ಧಿಗೆ ಕುಮಾರಸ್ವಾಮಿ ಅವರು ತಮ್ಮ 20 ತಿಂಗಳ ಆಡಳಿತ ಅವಧಿಯಲ್ಲಿ ಮಾಡಿರುವ ಸಾಧನೆ ಉದಾಹರಣೆಯಾಗಿದೆ. ರಾಜ್ಯದಲ್ಲಿ ರೈತರ ಪರ ಹೋರಾಟ ನಡೆಸುವ ನಾಯಕರ ಅಗತ್ಯವಿದ್ದು ಕುಮಾರ ಸ್ವಾಮಿಯವರು ಒಳ್ಳೆಯ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಕರ್ನಾಟಕ ಭವಿಷ್ಯಕ್ಕಾಗಿ ಕುಮಾರ ಸ್ವಾಮಿ ಅವರು ಮುಖ್ಯಮಂತ್ರಿ ಆಗುವುದು ಬಹಳ ಮುಖ್ಯವಾಗಿದ್ದು ಜೆಡಿಎಸ್ ಪಕ್ಷಕ್ಕೆ ಮತ ನೀಡಿ” ಎಂದು ವಿಡಿಯೋದಲ್ಲಿ ನಟಿ ರಚಿತಾ ರಾಮ್ ಕೇಳಿಕೊಂಡಿದ್ದಾರೆ.

 

About the author

ಕನ್ನಡ ಟುಡೆ

Leave a Comment