ರಾಜಕೀಯ

ಜೆಡಿಎಸ್ ಪಕ್ಷವನ್ನು ಬಲಗೊಳಿಸಿ, ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದೇ ನನ್ನ ಗುರಿ: ಎಚ್ ಡಿ ದೇವೇಗೌಡ

ಬೆಂಗಳೂರು: ನನ್ನ ವಯಸ್ಸಿನ ಕಾರಣದಿಂದಾಗಿ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ, ನನಗೆ ಯಾವುದೇ ರಾಜಕೀಯ ಆಕಾಂಕ್ಷೆಗಳಿಲ್ಲ, ನಾನು ಪ್ರಧಾನಿ ಹುದ್ದೆ ರೇಸ್ ನಲ್ಲಿಯೂ ಇಲ್ಲ, ಜೆಡಿಎಸ್ ಪಕ್ಷವನ್ನು ಬಲಗೊಳಿಸಿ, ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದೇ ನನ್ನ ಗುರಿ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ಪ್ರ: ಸಮ್ಮಿಶ್ರ ಸರ್ಕಾರ ಮತ್ತು ಅದರ ಸ್ಥಿರತೆ ಬಗ್ಗೆ ನಿಮ್ಮ ಆಲೋಚನೆ ಏನು?

ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಹಲವು ವರ್ಷಗಳಿಂದ ಬಿನ್ನಾಭಿಪ್ರಾಯಗಳಿವೆ, ಹೀಗಿದ್ದರೂ ನಾವು ಒಟ್ಟಾಗಿ ಸರ್ಕಾರ ರಚಿಸಿದ್ದೇವೆ, ವಿಧಾನಸಭೆ ಚುನಾವಣೆ ನಂತರ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಲು ಕಾಂಗ್ರೆಸ್ ನಿರ್ಧರಿಸಿತು, ಐದು ವರ್ಷಗಳ ಸಮಯಲ್ಲೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದಾರೆ. ಸದ್ಯ ಏನಾಗುತ್ತಿದೆ ಎಂಬುದನ್ನು ಇಡೀ ರಾಜ್ಯವೇ ನೋಡುತ್ತಿದೆ, ಸರ್ಕಾರದಗ ಸ್ಥಿರತೆ ಕಾಂಗ್ರೆಸ್ ಮೇಲೆ ಅವಲಂಬಿತವಾಗಿದೆ.

About the author

ಕನ್ನಡ ಟುಡೆ

Leave a Comment