ರಾಜಕೀಯ

ಜೆಡಿಎಸ್ ಬಂಡಾಯ ಶಾಸಕರ ಅನರ್ಹತೆ ಪ್ರಕರಣ ಮುಕ್ತಾಯ

ಬೆಂಗಳೂರು: ಜೆಡಿಎಸ್ ಬಂಡಾಯ ಶಾಸಕರ ಅನರ್ಹತೆ ಪ್ರಕರಣದ ವಿಚಾರಣೆ ಮುಕ್ತಾಯಗೊಂಡಿದ್ದು ಸ್ಪೀಕರ್‌ ಕೆ.ಬಿ.ಕೋಳಿವಾಡ ತೀರ್ಪು ಕಾಯ್ದಿರಿಸಿದ್ದಾರೆ.

ಕಳೆದ ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್‌ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ್ದ ಏಳು ಮಂದಿ ಭಿನ್ನಮತೀಯ ಶಾಸಕರನ್ನು ಕರ್ನಾಟಕ ವಿಧಾನಸಭೆಯ 1986 ನಿಯಮದನ್ವಯ ಅನರ್ಹಗೊಳಿಸುವಂತೆ ಸ್ಪೀಕರ್‌ಗೆ ಜೆಡಿಎಸ್‌ ಪಕ್ಷ ದೂರು ಸಲ್ಲಿಸಿತ್ತು.

ಆದರೆ ಎರಡು ವರ್ಷ ಕಳೆದರೂ ಸ್ಪೀಕರ್‌ ತೀರ್ಮಾನ ಪ್ರಕಟಿಸಿರಲಿಲ್ಲ. ಈ ಬಗ್ಗೆ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿ ತಕ್ಷಣ ವಿಚಾರಣೆ ನಡೆಸದಿದ್ದರೆ ನ್ಯಾಯ ಕೇಳಿ ಹೈಕೋರ್ಟ್‌ ಮೆಟ್ಟಿಲೇರುವುದಾಗಿ ಹೇಳಿದ್ದರು.

About the author

ಕನ್ನಡ ಟುಡೆ

Leave a Comment