ರಾಜ್ಯ ಸುದ್ದಿ

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಗೆ ಹೃದಯಾಘಾತ

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಹೈದರಾಬಾದ್ ನಲ್ಲಿ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ಅಲ್ಲಿನ ಓಜೋನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಕುರುಬ ಸಮಾವೇಶದಲ್ಲಿ ಭಾಗವಹಿಸಲು ಹೆಚ್.ವಿಶ್ವನಾಥ್ ಅವರು ಹೈದರಾಬಾದ್ ಗೆ ಆಗಮಿಸಿದ್ದರು. ಈ ವೇಳೆ ಅವರಿಗೆ ಲಘು ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ಜಯದೇವ ಆಸ್ಪತ್ರೆಯ ಡಾ.ಸಿ.ಎನ್.ಮಂಜುನಾಥ್ ಅವರು ಓಜೋನ್ ಆಸ್ಪತ್ರೆಯ ವೈದ್ಯರೊಂದಿಗೆ ನಿರಂತರ ಸಂಪರ್ಕದಿಂದಿದ್ದು, ವಿಶ್ವನಾಥ್ ಅವರ ಆರೋಗ್ಯ ಪರಿಸ್ಥಿತಿಯನ್ನು ನೋಡಿಕೊಂಡು ಅವರನ್ನು ಬೆಂಗಳೂರಿಗೆ ಕರೆತರುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

 

About the author

ಕನ್ನಡ ಟುಡೆ

Leave a Comment