ಸಿನಿ ಸಮಾಚಾರ

ಜೈಲು ಪಾಲಾಗಿದ್ದ ನಟ ದುನಿಯಾ ವಿಜಯ್ ಗೆ ಜಾಮೀನು, ಇಂದು ಸಂಜೆ ಬಿಡುಗಡೆಯಾಗುವ ಸಾಧ್ಯತೆ

ಬೆಂಗಳೂರು: ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಅವರನ್ನು ಅಪಹರಿಸಿ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದುನಿಯಾ ವಿಜಯ್ ಅವರಿಗೆ ಬೆಂಗಳೂರಿನ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ ಅವರು, 1 ಲಕ್ಷ ರುಪಾಯಿ ಬಾಂಡ್, ಇಬ್ಬರ ಶ್ಯೂರಿಟಿ ಮೇಲೆ ಜಾಮೀನು ನೀಡಿದ್ದಾರೆ. ಅಲ್ಲದೆ ತನಿಖೆಗೆ ಸಹಕರಿಸುವಂತೆ ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಎಚ್ಚರಿಕೆ ನೀಡಿದ್ದಾರೆ.
ಜಾಮೀನು ನೀಡಿದ್ದೇನೆ. ಮುಂದೆ ಹೀಗೆ ವರ್ತಿಸದಿರಿ, ಹೀರೋ ಆಗಿ ಇತರರಿಗೆ ಮಾದರಿಯಾಗಬೇಕು ಎಂದು ಕೋರ್ಟ್, ದುನಿಯಾ ವಿಜಯ್ ಪರ ವಕೀಲರಿಗೆ ಸೂಚಿಸಿದೆ. ಮ್ಕ್ಯಾಜಿಸ್ಟ್ರೇಟ್ ಕೋರ್ಟ್ ನಟ ದುನಿಯಾ ವಿಜಯ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಹಿನ್ನೆಲೆಯಲ್ಲಿ, ಆರೋಪಿ ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ದುನಿಯಾ ವಿಜಯ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಇಂದು ಸಂಜೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

About the author

ಕನ್ನಡ ಟುಡೆ

Leave a Comment