ರಾಜ್ಯ ಸುದ್ದಿ

ಜ್ಯೋತಿಷಿ ಭೇಟಿಯಾದ ಎಚ್​ಡಿಕೆ: ಐಟಿ ದಾಳಿ ಮಾನಸಿಕ ಒತ್ತಡ ನಿವಾರಣೆಗಾಗಿ ದ್ವಾರಕಾನಾಥ್ ಸಲಹೆ

ಕುಂದಾಪುರ: ಮೈತ್ರಿ ಪಕ್ಷದ ಅಭ್ಯರ್ಥಿಗಳ ಮೇಲೆ ಮಾನಸಿಕ ಒತ್ತಡ ಕೊಡುವ ಉದ್ದೇಶದಲ್ಲಿ ಬಿಜೆಪಿ ಕೃಪಾಪೋಷಿತ ಐಟಿ ದಾಳಿ ನಡೆಯುತ್ತಿದ್ದು, ದ್ವಾರಕಾನಾಥ್ ಸಲಹೆ ಮೇರೆಗೆ ಸೌಕೂರು ಜ್ಯೋತಿಷಿಯನ್ನು ಭೇಟಿಯಾಗಿರುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಸೌಕೂರಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜ್ಯೋತಿಷಿ ಸೊಕ್ಕೊಟ್ಟು ಮಂಜುನಾಥಯ್ಯ (ಹೆಬ್ಬಾರ್) ಮನೆಗೆ ಭೇಟಿ ನೀಡಿದ ನಂತರ ಸುದ್ದಿಗಾರರ ಜತೆ ಮಾತನಾಡಿದರು.

1985ರಲ್ಲಿ ತಂದೆ ದೇವೇಗೌಡರು ಸೊಕ್ಕೊಟ್ಟು ಮಂಜುನಾಥಯ್ಯ ಮನೆಗೆ ಭೇಟಿ ನೀಡಿದ್ದರು. ಅವರ ಆಶೀರ್ವಾದ ಪಡೆದುಕೊಳ್ಳಲು ಆಗಮಿಸಿದ್ದೇನೆ. ಈ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದು ಹೇಳಿದರು. ಜ್ಯೋತಿಷಿ ಸೊಕ್ಕೊಟ್ಟು ಮಂಜುನಾಥಯ್ಯ ಮಾತನಾಡಿ, ಬೆಂಗಳೂರಿನ ಪ್ರಸಿದ್ಧ ಜ್ಯೋತಿಷಿ ರಾಜಗುರು ದ್ವಾರಕಾನಾಥ್ ಹಾಗೂ ನಾವು ಹಲವು ವರ್ಷಗಳಿಂದ ಪರಿಚಿತರು. ಧರ್ಮ ಸೂಕ್ಷ್ಮ ವಿಚಾರಗಳನ್ನು ನಾವು ಪರಸ್ಪರ ರ್ಚಚಿಸುತ್ತೇವೆ. ಅವರ ಸಲಹೆಯಂತೆ ಮುಖ್ಯಮಂತ್ರಿ ನಮ್ಮಲ್ಲಿಗೆ ಆಗಮಿಸಿದ್ದಾರೆ ಎಂದು ತಿಳಿಸಿದರು. ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಜತೆಯಲ್ಲಿದ್ದರು.

About the author

ಕನ್ನಡ ಟುಡೆ

Leave a Comment