ರಾಜಕೀಯ

ಟಿಕೆಟ್‌ ‘ಕೈ’ ತಪ್ಪಿದ ಹಿನ್ನಲೆಯಲ್ಲಿ ಬಂಡಾಯ ವೆದ್ದಿರುವ ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ವಿಟ್ಠಲ, ಎಂ.ಬಿ.ಪಾಟೀಲ್‌ ಭೇಟಿ

ವಿಜಯಪುರ: ನಾಗಠಾಣಾ ಮೀಸಲು ಕ್ಷೇತ್ರದ ಟಿಕೆಟ್‌ ಕೈ ತಪ್ಪಿದ ಹಿನ್ನಲೆಯಲ್ಲಿ ಬಂಡಾಯ ವೆದ್ದಿರುವ ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ವಿಟ್ಠಲ ಕಟಕದೊಂಡ ಅವರು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು ಬಹುತೇಕ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ.

ನಾಗಠಾಣಾ ಕ್ಷೇತ್ರಕ್ಕೆ ಬಿಜೆಪಿ  ಮಾಜಿ ಸಚಿವ ಗೋವಿಂದ ಕಾರಜೋಳ ಪುತ್ರ ಡಾ. ಗೋಪಾಲ್‌ ಕಾರಜೋಳ ಅವರಿಗೆ 3 ನೇ ಪಟ್ಟಿಯಲ್ಲಿ ಟಿಕೆಟ್‌ ನೀಡಿದೆ. ವಿಟ್ಠಲ್‌ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಇಂದು ರಾಜೀನಾಮೆ ಸಲ್ಲಿಸಿ  ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಕಟಕದೊಂಡ ಅವರು ಯಡಿಯೂರಪ್ಪ ಆಪ್ತರಾಗಿದ್ದು, ಕೆಜೆಪಿಯಲ್ಲಿ ಗುರುತಿಸಿಕೊಂಡಿದ್ದರಾದರೂ ಟಿಕೆಟ್‌ ಕೈತಪ್ಪಿದೆ. ವಿಜಯಪುರ ಜಿಲ್ಲಾ ಬಿಜೆಪಿಯಲ್ಲಿ ಭಾರೀ ಭಿನ್ನಮತ ಭುಗಿಲೆದ್ದಿದ್ದು ಎಲ್ಲಾ ಕ್ಷೇತ್ರಗಳಲ್ಲಿ ಬಂಡಾಯ ಎದುರಾಗಿದೆ.

 

About the author

ಕನ್ನಡ ಟುಡೆ

Leave a Comment