ರಾಜ್ಯ ಸುದ್ದಿ

ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಬೇಡ : ಕೇಂದ್ರ ಕೌಶಲಾಭಿವೃದ್ಧಿ ಸಚಿವ ಅನಂತಕುಮಾರ್‌ ಹೆಗಡೆ

ಬೆಂಗಳೂರು:  ಟಿಪ್ಪು ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಶಿಷ್ಟಾಚಾರದ ಪ್ರಕಾರ ತಮ್ಮ ಹೆಸರು ಮುದ್ರಿಸದಂತೆ ಕೇಂದ್ರ ಕೌಶಲಾಭಿವೃದ್ಧಿ ಸಚಿವ ಅನಂತಕುಮಾರ್‌ ಹೆಗಡೆ ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಅವರಿಗೆ ಪತ್ರ ಬರೆದಿದ್ದಾರೆ.

”ರಾಜ್ಯ ಸರಕಾರ ನವೆಂಬರ್‌ 10ರಂದು ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದೆ. ಈ ಬಗ್ಗೆ ಪ್ರಾರಂಭದಿಂದಲೂ ನಾಡಿನ ಸಾರ್ವಜನಿಕರು ಹಾಗೂ ವಿಚಾರವಾದಿಗಳು ದೊಡ್ಡ ಮಟ್ಟದಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ಟಿಪ್ಪು ಕನ್ನಡ ಮತ್ತು ಹಿಂದು ವಿರೋಧಿಯಾಗಿರುವುದು ಇತಿಹಾಸದಿಂದ ತಿಳಿಯುತ್ತದೆ. ಈ ಹಿಂದೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಟಿಪ್ಪು ಜಯಂತಿ ವಿರೋಧಿ ಹೋರಾಟ ನಡೆದು ಹಿಂಸಾಚಾರಕ್ಕೆ ಕಾರಣವಾಗಿದೆ. ಒಬ್ಬ ಸಮಾಜ ಘಾತುಕ ವ್ಯಕ್ತಿಯನ್ನು ವೈಭವೀಕರಿಸಿ ಆತನ ಜಯಂತಿ ಆಚರಣೆಗೆ ಮುಂದಾಗಿರುವುದು ಖಂಡನೀಯ,” ಎಂದು ಪತ್ರದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

About the author

ಕನ್ನಡ ಟುಡೆ

Leave a Comment