ಕ್ರೀಡೆ

ಟೆಸ್ಟ್ ಸರಣಿ ಗೆದ್ದು ಇತಿಹಾಸ ಬರೆದ ಟೀಂ ಇಂಡಿಯಾಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದೇನು

ಇಸ್ಲಾಮಾಬಾದ್: ಆಸ್ಟ್ರೇಲಿಯಾ ನೆಲದಲ್ಲಿ 71 ವರ್ಷಗಳ ಬಳಿಕ ಕಾಂಗರೂಗಳನ್ನು ಬಗ್ಗು ಬಡಿದು ಬಾರ್ಡರ್ ಗವಾಸ್ಕರ್ ಟ್ರೋಫಿ ಎತ್ತಿ ಹಿಡಿದ ಟೀಂ ಇಂಡಿಯಾಗೆ ದೇಶ-ವಿದೇಶಗಳಿಂದ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದ್ದು ಶತ್ರು ರಾಷ್ಟ್ರ ಪಾಕಿಸ್ತಾನ ಪ್ರಧಾನಿ ಸಹ ಟೀಂ ಇಂಡಿಯಾ ಆಟಗಾರರಿಗೆ ಅಭಿನಂದನೆ ತಿಳಿಸಿದ್ದಾರೆ.
ಪಾಕ್ ಪ್ರಧಾನಿ ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಭಾರತ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು ಎಂದಿದ್ದಾರೆ. ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ 2-1 ಅಂತರದಿಂದ ಬಾರ್ಡರ್-ಗವಾಸ್ಕರ್ ಟ್ರೋಪಿ ಎತ್ತಿ ಹಿಡಿದಿತ್ತು. ಆಸ್ಟ್ರೇಲಿಯಾದಲ್ಲಿ ಐತಿಹಾಸಿಕ ಕ್ರಿಕೆಟ್  ಸಾಧನೆ ಆಸ್ಟ್ರೇಲಿಯಾದಲ್ಲಿ ಹೋರಾಡಿ, ಅರ್ಹ ಸರಣಿ ಗೆದ್ದ ಟೀಂ ಇಂಡಿಯಾಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ. ಈ ಸರಣಿ ಅತ್ಯುತ್ತಮ ಪ್ರದರ್ಶನ ಹಾಗೂ ಒಗ್ಗಟ್ಟಿಗೆ ಸಾಕ್ಷಿಯಾಗಿದೆ. ಮುಂದಿನ ಪಂದ್ಯಗಳಲ್ಲಿಯೂ ಒಳ್ಳೆಯದಾಗಲಿ ಎಂದು ಪ್ರಧಾನಿ ಮೋದಿ ಟ್ವಟ್ ಮಾಡಿದ್ದಾರೆ.

About the author

ಕನ್ನಡ ಟುಡೆ

Leave a Comment