ರಾಜ್ಯ ಸುದ್ದಿ

ಡಿನೋಟಿಫಿಕೇಷನ್ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್’ಚಿಟ್

ಮೈಸೂರು: ಎಂಡಿಎ ನಿವೇಶನ ಅಕ್ರಮ ಡಿನೋಫಿಕೇಷನ್ ಆರೋಪಕ್ಕೆ ಗುರಿಯಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಕರಣದಿಂದ ಬುಧವಾರ ಬಿಗ್ ರಿಲೀಫ್ ದೊರತಿದೆ.
ಪ್ರಕರಣದಲ್ಲಿ ಸತ್ಯಾಂಶವಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ನಿನ್ನೆ ಬಿ ರಿಪೋರ್ಟ್ ಸಲ್ಲಿಸಿದ್ದಾರ. ಈ ನಡುವೆ ಪ್ರಕರಣ ಸಂಬಂಧ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದ ಆರ್’ಟಿಐ ಕಾರ್ಯಕರ್ತ ಗಂಗರಾಜು ಅವರು ಪೊಲೀಸರ ವರದಿ ಪ್ರಶ್ನಿಸಿ ಜಿಲ್ಲಾ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದಾರೆ. ಸಿದ್ದರಾಮಯ್ಯ ಅವರು ಎಂಡಿಎ ನಿವೇಶನ ಡಿನೋಟಿಫೈ ಮಾಡಿ ಅಕ್ರಮ ಮನೆ ನಿರ್ಮಿಸಿದ್ದಾರೆ ಎಂದು ಆರೋಪಿಸಿ ಗಂಗರಾಜು ಅವರು ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದರು.
ನ್ಯಾಯಾಲಯ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ವರದಿ ನೀಡುವಂತೆ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಆದೇಶ ನೀಡಿತ್ತು. ಆದೇಶದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಎಂಡಿಎ ಮಾಜಿ ಅಧ್ಯಕ್ಷ ಸಿ.ಬಸವೇಗೌಡ, ನಿಕಟಪೂರ್ವ ಅಧ್ಯಕ್ಷ ಡಿ.ಧ್ರುವಕುಮಾರ್, ಹಾಲಿ ಆಯುಕ್ತ ಕಾಂತರಾಜು ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ದೂರಿನಲ್ಲಿರುವ ಆರೋಪಗಳಿಗೆ ಯಾವುದೇ ಆಧಾರವಿಲ್ಲ ತಪ್ಪು ಗ್ರಹಿಕೆಯಿಂದ ದೂರು ನೀಡಾಗಿದೆ ಎಂದು ವರದಿ ಸಲ್ಲಿಸಿದ್ದಾರೆ.

About the author

ಕನ್ನಡ ಟುಡೆ

Leave a Comment