ಸಿನಿ ಸಮಾಚಾರ

ಡಿಸೆಂಬರ್ ನಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಬಾಲ್ಯದ ಗೆಳತಿ ಪ್ರೇರಣಾ ಜೊತೆ ನಿಶ್ಚಿತಾರ್ಥ

ಬೆಂಗಳೂರು: ಸ್ಯಾಂಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ.
ಬಹುದಿನದ ಗೆಳತಿ, ಸ್ನೇಹಿತೆ ಜೊತೆ ಧ್ರುವ ಸರ್ಜಾ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ ದಿನ ತಾವು ಶೀಘ್ರದಲ್ಲೇ ಲವ್ ಮ್ಯಾರೇಜ್ ಆಗುವುದಾಗಿ ಹೇಳಿದ್ದರು. ಕಳೆದ ಕೆಲ ತಿಂಗಳ ಹಿಂದೆ ಧ್ರುವ ಅಣ್ಣ ಚಿರಂಜೀವಿ ಸರ್ಜಾ ನಟಿ ಮೇಘನಾ ರಾಜ್ ಅವರನ್ನು ವರಿಸಿದ್ದರು,  ಮದುವೆಯಾಗಿತ್ತು. ಮೂಲಗಳ ಪ್ರಕಾರ ತಮ್ಮ ಬಹುಕಾಲದ ಗೆಳತಿಯ ಜೊತೆ ಮದುವೆಯಾಗಲು ಧ್ರುವ ಸರ್ಜಾ ನಿರ್ಧರಿಸಿದ್ದಾರೆ.

About the author

ಕನ್ನಡ ಟುಡೆ

Leave a Comment