ರಾಜಕೀಯ

ಡಿ.ಕೆ ಶಿವಕುಮಾರ್ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಭೇಟಿ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಬುಧವಾರ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರ ಮನೆಗೆ ತೆರಳಿ ಮಾತುಕತೆ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಪ್ರತಿಪಕ್ಷ ನಾಯಕ ಬಿಎಸ್ ವೈ ಜಲಸಂಪನ್ಮೂಲ ಸಚಿವರೊಂದಿಗೆ ನಡೆಸಿದ ಮಾತುಕತೆಯ ವಿವರ ಬಹಿರಂಗವಾಗಿಲ್ಲ. ಆದರೆ ಡಿಕೆಶಿ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಶಿವಮೊಗ್ಗ ನೀರಾವರಿ ಯೋಜನೆಗಳು ಬಗ್ಗೆ ಮತ್ತು ಸಿಗಂದೂರು ಸೇತುವೆ ನಿರ್ಮಾಣದ ಬಗ್ಗೆ ಶಿವಕುಮಾರ್ ಜೊತೆ ಚರ್ಚೆ ಮಾಡಿದ್ದೇನೆ ಎಂದರು. ಡಿ ಕೆ ಶಿವಕುಮಾರ್ ಅವರು ಬಹಳ ಆತ್ಮೀಯವಾಗಿ ನಮ್ಮ ಜೊತೆ ಮಾತಾಡಿದ್ದಾರೆ. ನಾವಿಬ್ಬರೂ ಉತ್ತಮ ಸ್ನೇಹಿತರು. ಅವರನ್ನು ನಮ್ಮ ಜಿಲ್ಲೆಗೆ ಆಹ್ವಾನಿಸಿದ್ದೇನೆ ಎಂದು ಹೇಳಿದ್ದಾರೆ.
ಶಾಸಕ ಹರತಾಳು ಹಾಲಪ್ಪ ಮತ್ತು ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಹೊರಗಿಟ್ಟು ಪ್ರತ್ಯೇಕವಾಗಿ ಮಾತನಾಡಿರುವ ಈ ಇಬ್ಬರು ನಾಯಕರು ಯಾವುದೇ ಪ್ರತಿಕ್ರಿಯೆ ನೀಡಲು ಮುಂದಾಗಿಲ್ಲ. ರಾಜಕೀಯ ಚರ್ಚೆಯ ಬಗ್ಗೆ ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲ ಎಂದು ಬಿಎಸ್​ವೈ ಜಾರಿಕೊಂಡಿದ್ದಾರೆ.

About the author

ಕನ್ನಡ ಟುಡೆ

Leave a Comment