ರಾಜಕೀಯ

ಡಿ.22ಕ್ಕೇ ಸಂಪುಟ ವಿಸ್ತರಣೆ: ಸಚಿವಾಕಾಂಕ್ಷಿಗಳಿಗೆ ಮತ್ತೆ ಸಿದ್ದು ಭರವಸೆ

ಬೆಂಗಳೂರು: ಸಮನ್ವಯ ಸಮಿತಿ ನಿರ್ಧಾರದಂತೆಯೇ ಡಿ.22ಕ್ಕೇ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.

ಡಿ.22ಕ್ಕೆ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಪಡಿಸಿರುವುದು ಕೇವಲ ಕಣ್ಣೊರೆಸುವ ತಂತ್ರ, ಲೋಕಸಭಾ ಚುನಾವಣೆವರೆಗೂ ಸಂಪುಟ ವಿಸ್ತರಣೆಯಾಗುವುದಿಲ್ಲ ಸಚಿವಾಕಾಂಕ್ಷಿಗಳು ಅಸಮಾಧಾನ ವ್ಯಕ್ತಪಡಿಸುತ್ತಿರುವ ಹಿನ್ನಲೆಯಲ್ಲಿ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.22ಕ್ಕೆ ಸಂಪುಟ ವಿಸ್ತರಣೆ ಣಾಡಲಾಗುತ್ತದೆ. ಅಂದೇ ಸಚಿವರ ಪಟ್ಟಿ ಕೂಡ ಅಂತಿಮಗೊಳಿಸಿ ಘೋಷಣೆ ಮಾಡಲಾಗುವುದು ಎಂದು ಹೇಳಿದ್ದಾರೆ. ಡಿ.22ಕ್ಕೆ ಸಚಿವ ಸಂಪುಟ ವಿಸ್ತರಣೆಯಾಗುವುದಿಲ್ಲ ಎಂಬುದು ಊಹಾಪೋಹ ಮಾತ್ರವಷ್ಟೇ ಎಂದು ತಿಳಿಸಿದ್ದಾರೆ.

About the author

ಕನ್ನಡ ಟುಡೆ

Leave a Comment