ರಾಷ್ಟ್ರ ಸುದ್ದಿ

ಡಿ.4ಕ್ಕೆ ಸೋನಿಯಾ, ರಾಹುಲ್ ಐಟಿ ಅರ್ಜಿ ಅಂತಿಮ ವಿಚಾರಣೆ

ನವದೆಹಲಿ: ಆದಾಯ ತೆರಿಗೆ ಇಲಾಖೆಗೆ ತಮ್ಮ ವಿರುದ್ಧದ ಕ್ರಿಮಿನಲ್ ತನಿಖೆಯನ್ನು ರದ್ದುಗೊಳಿಸಲು ಆದೇಶಿಸುವಂತೆ ಕೋರಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಡಿ.4ಕ್ಕೆ ಅರ್ಜಿಗಳ ಅಂತಿಮ ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ಮಂಗಳವಾರ ಹೇಳಿದೆ.

2011-12ನೇ ಸಾಲಿನ ಆದಾಯ ತೆರಿಗೆ ಪಾವತಿ ಕುರಿತು ಮರು ವಿಚಾರಣೆಗೆ ಐಟಿ ಇಲಾಖೆ ಮುಂದಾಗಿರುವುದು ಗಾಂಧಿ ಕುಟುಂಬದ ಸಂಕಷ್ಟಕ್ಕೆ ಕಾರಣವಾಗಿದೆ. ಆದಾಯ ತೆರಿಗೆ ಇಲಾಖೆ ಕ್ರಮವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿತ್ತು. ಇದರಿಂದ ಆದಾಯ ತೆರಿಗೆ ಇಲಾಖೆ ನಡೆಸುತ್ತಿರುವ ಕ್ರಿಮಿನಲ್ ವಿಚಾರಣೆ ಮುಂದುವರಿದಿತ್ತು.

ಆದೇಶ ಪ್ರಶ್ನಿಸಿ ಮೇಲ್ಮನವಿ: ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ನಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಕೆ.ಸಕ್ರಿ ಹಾಗೂ ನ್ಯಾ.ಅಬ್ದುಲ್ ನಜೀರ್ ಅವರ ವಿಭಾಗೀಯ ಪೀಠವು, ಅಂತಿಮ ವಿಚಾರಣೆಯನ್ನು ಡಿ.4ಕ್ಕೆ ಮುಂದೂಡಿತು. ಜತೆಗೆ ಮಧ್ಯಂತರ ಆದೇಶ ನೀಡಲು ನ್ಯಾಯಪೀಠ ನಿರಾಕರಿಸಿತು.

About the author

ಕನ್ನಡ ಟುಡೆ

Leave a Comment