ಕ್ರೀಡೆ

ಡೆಲ್ಲಿ ವಿರುದ್ಧ ಹೈದರಾಬಾದ್ ಗೆ 5 ವಿಕೆಟ್ ಗಳ ಭರ್ಜರಿ ಗೆಲುವು

ನವದೆಹಲಿ: ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ ಗುರುವಾರ ಐದು ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇಂದು ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ಐಪಿಎಲ್ ನ 16ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ 129 ರನ್‌ಗಳಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಕಟ್ಟಿಹಾಕಲು ಯಶಸ್ವಿಯಾಯಿತು. ನಂತರ ಬ್ಯಾಟಿಂಗ್ ಮಾಡಿದ ಹೈದರಾಬಾದ್ ಐದು ವಿಕೆಟ್‌ಗಳ ಗೆಲುವು ಸಾಧಿಸಿದೆ. ಟಾಸ್ ಸೋತರು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಡೆಲ್ಲಿ ಕ್ಯಾಪಿಟಲ್ಸ್, ಮೊದಲ 10 ಓವರ್​ನಲ್ಲೇ ಅಗ್ರ ಕ್ರಮಾಂಕದ ಪೃಥ್ವಿ ಶಾ (11), ಶಿಖರ್‌ ಧವನ್‌ (12) ಮತ್ತು ವಿಕೆಟ್‌ ಕೀಪರ್‌ ರಿಷಭ್‌ ಪಂತ್‌(5) ವಿಕೆಟ್‌ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತು. ಕೊನೆಯ ಓವರ್​ನಲ್ಲಿ ಕ್ರಿಸ್‌ ಮೊರಿಸ್‌ (17) ಹಾಗೂ ಅಕ್ಷ ರ್‌ ಪಟೇಲ್‌ (23) ಭರ್ಜರಿ ಬ್ಯಾಟಿಂಗ್​ನ ಪರಿಣಾಮ ಡೆಲ್ಲಿ ಕ್ಯಾಪಿಟಲ್ಸ್​ 129 ರನ್​ಗಳ ಸಾಧಾರಣ ಸವಾಲು ನೀಡಿತು. ಸುಲಭ ಸವಾಲನ್ನು ಬೆನ್ನಟ್ಟಿದ ಹೈದರಾಬಾದ್ ಜಾನಿ ಬೈರ್‌ಸ್ಟೋವ್‌(48) ಅವರ ಭರ್ಜರಿ ಬ್ಯಾಟಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 9 ಎಸೆತಗಳು ಬಾಕಿ ಇರುವಂತೆಯೇ 5 ವಿಕೆಟ್‌ಗಳ ಸುಲಭ ಜಯ ದಾಖಲಿಸಿದೆ. ಇನ್ನು ಸನ್‌ರೈಸರ್ಸ್ ಹೈದರಾಬಾದ್  ಪರ ವೇಗಿ ಭುವನೇಶ್ವರ್‌ ಕುಮಾರ್‌, ಸಿದ್ಧಾರ್ಥ್‌ ಕೌಲ್‌ ಮತ್ತು ಆಲ್‌ರೌಂಡರ್‌ ಮೊಹಮ್ಮದ್‌ ನಬಿ ತಲಾ ಎರಡು ವಿಕೆಟ್‌ ಪಡೆದು ಮಿಂಚಿದರು.

About the author

ಕನ್ನಡ ಟುಡೆ

Leave a Comment