ರಾಜ್ಯ ಸುದ್ದಿ

ತಿರುಪತಿ ಮಾದರಿಯಲ್ಲಿ ಮಲಮಹದೇಶ್ವರ ಬೆಟ್ಟದ ಅಭಿವೃದ್ಧಿ: ರಾಜ್ಯ ಸರ್ಕಾರ

ಮೈಸೂರು: ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ತಿರುಪತಿ ಮಾದರಿಯಲ್ಲಿ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟವನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಸುತ್ತೂರು ಮಠ ನಿರ್ಮಿಸಿರುವ 69 ಕೊಠಡಿ ನಿಲಯದ ಸಂಕೀರ್ಣವನ್ನು ನಿನ್ನೆ ಉದ್ಘಾಟನೆಗೊಳಿಸಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಈ ವಿಷಯ ತಿಳಿಸಿದರು,16 ಕಿಲೋ ಮೀಟರ್ ಉದ್ದದ ತಲಬೆಟ್ಟದಿಂದ ಎಂಎಂ ಬೆಟ್ಟದವರೆಗೆ ನೆಲಹಾಸುಗಳ ಕಾಮಗಾರಿ ಇನ್ನು 10 ದಿನಗಳಲ್ಲಿ ಆರಂಭವಾಗಲಿದೆ. ಅಲ್ಲದೆ 100 ಅಡಿ ಎತ್ತರದ ಮಹದೇಶ್ವರ ಮೂರ್ತಿ ನಿರ್ಮಾಣಕ್ಕೆ ಭೂಮಿ ಒದಗಿಸಲು ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.ಅರಣ್ಯ ಇಲಾಖೆಯ ಆಕ್ಷೇಪದಿಂದಾಗಿ ವಿದ್ಯುತ್ ಕೇಂದ್ರವನ್ನು ಸ್ಥಾಪಿಸಲು ಸಾಧ್ಯವಾಗುತ್ತಿಲ್ಲ ಎಂದು ಶಾಸಕ ನರೇಂದ್ರ ಹೇಳಿದಾಗ ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವುದಾಗಿ ಮುಖ್ಯಮಂತ್ರಿ ತಿಳಿಸಿದರು,ಮಲಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳು ಮತ್ತು ಡೈರಿ ಹಾಗೂ ಇತರ ಘಟಕಗಳ ಉದ್ಘಾಟನೆಗೆ ಸದ್ಯದಲ್ಲಿಯೇ ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡುವುದಾಗಿ ಕೂಡ ಕುಮಾರಸ್ವಾಮಿ ತಿಳಿಸಿದರು.

About the author

ಕನ್ನಡ ಟುಡೆ

Leave a Comment