ರಾಜ್ಯ ಸುದ್ದಿ

ತುಮಕೂರು: ಕಾರು ಅಪಘಾತ ಇಬ್ಬರು ನೌಕರರು ಸಾವು

ತುಮಕೂರು: ರಾಷ್ಟ್ರೀಯ ಹೆದ್ದಾರಿ-48ರ ಶಿರಾ ಬೈಪಾಸ್ ಹತ್ತಿರ ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಪರಮಾಣು ಶಕ್ತಿ ಇಲಾಖೆಯ ಇಬ್ಬರು ನೌಕರರು ಸ್ಥಳದಲ್ಲಿಯೇ ಮೃತಪಟ್ಟು ಐವರು ವೈದ್ಯಕೀಯ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ. ಮೃತಪಟ್ಟವರನ್ನು ಬೆಳಗಾವಿಯ ಕರಟಗಿ ಮೂಲದ ಶ್ರೀರಾಮಚಂದ್ರ(43ವ)ಹಾಗೂ ತಾಂತ್ರಿಕ ವಿಭಾಗದ ಉಡುಪಿ ಜಿಲ್ಲೆಯ ಹೆಬ್ರಿ ತಾಲ್ಲೂಕಿನ ಧನಂಜಯ ಎಂದು ಗುರುತಿಸಲಾಗಿದೆ. ಬೆಂಗಳೂರಿಗೆ ಬರುತ್ತಿದ್ದ ವೇಳೆ ಬೆಂಗಳೂರು ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತವಾದ ರಭಸಕ್ಕೆ ಕಾರು ನೆಗೆದು ಬಿದ್ದು ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.ನಿನ್ನೆ ಮುಂಜಾನೆ 5.30ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು ವೈದ್ಯಕೀಯ ವಿದ್ಯಾರ್ಥಿಗಳು ಸಿರ್ಸಿಗೆ ಹಿಂತಿರುಗುತ್ತಿದ್ದರು. ಗಾಯಗೊಂಡ ವಿದ್ಯಾರ್ಥಿಗಳಲ್ಲಿ ಮೂವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡವರನ್ನು ಬೆಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ವರ್ಗಾಯಿಸಲಾಗಿದೆ.

About the author

ಕನ್ನಡ ಟುಡೆ

Leave a Comment