ರಾಜ್ಯ ಸುದ್ದಿ

ತುಮಕೂರು ವಿಶ್ವವಿದ್ಯಾನಿಲಯಕ್ಕೆ ಶಿವಕುಮಾರ ಸ್ವಾಮೀಜಿ ಹೆಸರಿಡಿ: ಸರ್ಕಾರಕ್ಕೆ ಬಿಜೆಪಿ ಆಗ್ರಹ

ತುಮಕೂರು: ರಾಜ್ಯ ಸರ್ಕಾರ ‘ತುಮಕೂರು ವಿಶ್ವವಿದ್ಯಾನಿಲಯಕ್ಕೆ ಶ್ರೀ ಶಿವಕುಮಾರ ಸ್ವಾಮೀಜಿ ಹೆಸರನ್ನು ನಾಮಕರಣ ಮಾಡಬೇಕು ಎಂದು ಗುಂಡ್ಲುಪೇಟೆ ಬಿಜೆಪಿ ಶಾಸಕ ನಿರಂಜನ ಕುಮಾರ್ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಲಕ್ಷಾಂತರ ಜನರಿಗೆ ವಿದ್ಯಾ ದಾಸೋಹ ಮಾಡಿರುವ ಶ್ರೀ ಶಿವಕುಮಾರ ಸ್ವಾಮಿಗಳ ದಶಕಗಳ ಕರ್ಮ ಭೂಮಿಯಾಗಿದ್ದ ಅದೇ ಜಿಲ್ಲೆಯ ವಿಶ್ವವಿದ್ಯಾಲಯಕ್ಕೆ ಅವರ ಹೆಸರನ್ನು ನಾಮಕರಣ ಮಾಡುವುದರಿಂದ ವಿಶ್ವವಿದ್ಯಾಲಯದ ಗೌರವ ಇನ್ನಷ್ಟು ಹೆಚ್ಚಾಗುವುದು ಎಂದು ಕನ್ನಡಪ್ರಭ.ಕಾಂ ಜೊತೆಗೆ ಮಾತನಾಡಿರುವ ಶಾಸಕ ನಿರಂಜನ ಕುಮಾರ್ ತಿಳಿಸಿದ್ದಾರೆ. ಇದೇ ವೇಳೆ ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡಬೇಕು ಎಂಬ ಕೂಗ ಜೋರಾಗಿತ್ತು. ಆದರೆ ಈ ಬಾರಿಯ ಭಾರತ ರತ್ನ ಪ್ರಶಸ್ತಿ ಪ್ರಕಟವಾಗಿದ್ದು ಅದರಲ್ಲಿ ಸ್ವಾಮೀಜಿಗಳ ಹೆಸರು ಇಲ್ಲದಿರುವುದರಿಂದ ರಾಜ್ಯದಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

About the author

ಕನ್ನಡ ಟುಡೆ

Leave a Comment