ರಾಷ್ಟ್ರ ಸುದ್ದಿ

ತೆಲಂಗಾಣ: ಮಣ್ಣಿನ ದಿಬ್ಬ ಕುಸಿದು 10 ಮಹಿಳಾ ಕಾರ್ಮಿಕರು ಸಾವು

ನಾರಾಯಣಪೇಟ್: ಮಣ್ಣಿನ ದಿಬ್ಬ ಕುಸಿದು 10 ಮಹಿಳಾ ಕಾರ್ಮಿಕರು ಮೃತಪಟ್ಟ ದಾರುಣ ಘಟನೆ ಬುಧವಾರ  ತೆಲಂಗಾಣದ ನಾರಾಯಣ್ ಪೇಟೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಮರಿಕಲ್ ಮಂಡಲದ ತಿಲೆರು ಗ್ರಾಮದಲ್ಲಿ ಈ ದುರಂತ ನಡೆದಿದ್ದು,  ಉದ್ಯೋಗ ಖಾತ್ರಿ ಯೋಜನೆಯಡಿ ದಿಬ್ಬವನ್ನು ಅಗೆಯುವ ಕಾರ್ಯದಲ್ಲಿ ನಿರತರಾಗಿದ್ದಾಗ ದುರ್ಘಟನೆ ಸಂಭವಿಸಿದೆ. ಮಣ್ಣಿನ ದಿಬ್ಬ ಕುಸಿದು ಬಿದ್ದಾಗ ಸ್ಥಳದಿಂದ ಓಡಲು ಸಾಧ್ಯವಾಗದೆ 10 ಮಂದಿ ಮಹಿಳೆಯರು ಮಣ್ಣಿನಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ ಎಂದು ಮರಿಕಲ್ ಪೊಲೀಸರು ತಿಳಿಸಿದ್ದಾರೆ.
ಮೃತ ಮಹಿಳೆಯರನ್ನು ಅನುರಾಧಾ(30), ಭೀಮಮ್ಮ(40), ಬುಡಮ್ಣ(20), ಬಿ ಲಕ್ಷ್ಮೀ(28), ಕೆ ಲಕ್ಷ್ಮಿ(30), ಮಂಗಮ್ಮ(32), ಅನಂತಮ್ಮ(45), ಕೇಶಮ್ಮ(40), ಬಿ ಅನಂತಮ್ಮ(35) ಹಾಗೂ ಲಕ್ಷ್ಮಿ(28) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಐವರು ಕಾರ್ಮಿಕರು ಪಾರಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಧಾವಿಸಿದ್ದು, ಗ್ರಾಮದ ಜನರ ಸಹಾಯದಿಂದ 10 ಮೃತದೇಹಗಳನ್ನು ಹೊರತೆಗೆಯಲಾಗಿದೆ.

About the author

ಕನ್ನಡ ಟುಡೆ

Leave a Comment