ರಾಷ್ಟ್ರ ಸುದ್ದಿ

ತೈಲ ಬೆಲೆ ರೂ. 2.50 ಇಳಿಕೆ; ರಾಜ್ಯಗಳಿಗೂ ಇಳಿಕೆ ಮಾಡುವಂತೆ ಕೆಂದ್ರ ಮನವಿ

ನವದೆಹಲಿ : ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಗಳು ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದ್ದರೂ ಸುಮ್ಮನಿದ್ದ ಕೇಂದ್ರ ಸರ್ಕಾರ ಇಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಯಲ್ಲಿ ತುರ್ತು ಸಭೆಯನ್ನು ಕರೆದು, ಕೇಂದ್ರ ಸಚಿವರಾದ ಅರುಣ್​ ಜೇಟ್ಲಿ, ಧರ್ಮೇಂದ್ರ ಪ್ರಧಾನ್​ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್​ ಶಾ ಜತೆ ಚರ್ಚೆ ನಡೆಸಿದರು.

ಅದರ ಬೆನ್ನಲ್ಲೇ ಪೆಟ್ರೋಲ್​ ಮತ್ತು ಡೀಸೆಲ್​ಗಳ ಮೇಲೆ ಹೇರಿರುವ ಅಬಕಾರಿ ಸುಂಕವನ್ನು ಇಳಿಸುವ ಮಹತ್ವದ ನಿರ್ಧಾರವನ್ನು ಕೇಂದ್ರ  ಕೈಗೊಂಡಿದೆ. ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ರೂ. 2.50 ಕಡಿಮೆ ಮಾಡುವ ಆದೇಶವನ್ನು ಕೇಂದ್ರ ಸರ್ಕಾರ ಹೊರಡಿಸಿದೆ. ಇಂಧನ ಬೆಲೆ ಹೆಚ್ಚಳದಿಂದ ದಿನಬಳಕೆ ವಸ್ತುಗಳು ಮತ್ತು ಕೃಷಿ ಚಟುವಟಿಕೆಗಳಿಗೆ ದೊಡ್ಡ ಮಟ್ಟದ ಆಘಾತವಾಗಿತ್ತು. ಈಗ ಎಚ್ಚೆತ್ತುಕೊಂಡಿರುವ ಕೇಂದ್ರ ಜನರಿಗೆ ನೆರವಾಗುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ.

ಜತೆಗೆ ಕೇಂದ್ರ ಸರ್ಕಾರ ರೂ. 2.50 ಕಡಿಮೆ ಮಾಡಿದಂತೆ ರಾಜ್ಯ ಸರ್ಕಾರಗಳೂ ಇಂಧನ ಸುಂಕವನ್ನು ಕಡಿಮೆ ಮಾಡುವಂತೆ ಕೇಂದ್ರ ಮನವಿ ಮಾಡಿದೆ. ಕರ್ನಾಟಕ ರಾಜ್ಯದಲ್ಲಿ ಈಗಾಗಲೇ ಸರ್ಕಾರ ರೂ. 2 ಕಡಿಮೆ ಮಾಡಿತ್ತು. ಈ ಮೂಲಕ ಒಟ್ಟಾರೆ ರೂ. 4.50 ರೂ ಪೆಟ್ರೋಲ್​ ಮತ್ತು ಡೀಸೆಲ್​ಗೆ ಕಡಿಮೆಯಾದಂತಾಗಿದೆ. ಆದರೂ ಇಂಧನ ಬೆಲೆ ಹಿಂದೆಂದಿಗಿಂತ ಹೆಚ್ಚೇ ಇದೆ ಎಂಬುದು ಗಮನಾರ್ಹ.

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಸುದ್ದಿಗೋಷ್ಠಿ ನಡೆಸಿ ಸಭೆಯ ನಿರ್ಧಾರಗಳ ಬಗ್ಗೆ ತಿಳಿಸಿದರು. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಛಾತೈಲ ದರ ದಾಖಲೆಯ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಕಚ್ಛಾತೈಲ ದರ ದಾಖಲೆ ಏರಿಕೆಯಾಗಿದೆ. ಅಮೆರಿಕ ಬಡ್ಡಿದರವನ್ನು ಶೇ.3.2ರಷ್ಟು ಏರಿಕೆ ಮಾಡಿದೆ ಎಂದು ಜೇಟ್ಲಿ ಬೆಲೆ ಏರಿಕೆಯ ಕಾರಣವನ್ನು ತಿಳಿಸಿದರು.

ಕಚ್ಛಾತೈಲ ದರ ಏರಿಕೆಯಿಂದ ಜಾಗತಿಕ ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ ಎಂದ ಅವರು, ಇದರಿಂದ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿದೆ ಎಂದರು. “ತೈಲ ಬೆಲೆ ಇಳಿಸಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದೇವೆ. ಹಣದುಬ್ಬರ ಪ್ರಮಾಣ ನಿಯಂತ್ರಣದಲ್ಲಿದೆ. ಪೆಟ್ರೋಲಿಯಂ ಮೇಲಿನ ಅಬಕಾರಿ ಸುಂಕ ರೂ. 2.50 ಇಳಿಕೆ ಮಾಡಲು ನಿರ್ಧರಿಸಿದ್ದೇವೆ,” ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮಹತ್ವದ ಘೋಷಣೆ ಮಾಡಿದರು.

ಇಷ್ಟು ದಿನ ಮೌನ:

ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಿದ್ದರೂ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಯಾವುದೇ ಕ್ರಮಕ್ಕೂ ಮುಂದಾಗಿರಲಿಲ್ಲ. ಕಡೆಗೂ ರಂಗ ಪ್ರವೇಶಿಸಿದ ಮೋದಿ ಅವರು ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಚಿವರೊಂದಿಗೆ ಗುರುವಾರ ಈಗಷ್ಟೆ ತುರ್ತು ಸಭೆ ಕರೆದಿದ್ದರು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ವಿತ್ತ ಸಚಿವ ಅರುಣ್ ಜೈಟ್ಲಿ ಹಾಗೂ ಧರ್ಮೇಂದ್ರ ಪ್ರಧಾನ್ ಜೊತೆ ತುರ್ತು ಸಭೆ ಕರೆದ ಪ್ರಧಾನಿ ನರೇಂದ್ರ ಮೋದಿ, ತೈಲ ಬೆಲೆ ಏರಿಕೆ ಕೃಷಿ ಕ್ಷೇತ್ರದ ಮೇಲೆ ಬೀರುತ್ತಿರುವ ಪರಿಣಾಮಗಳ ಬಗ್ಗೆ ಚರ್ಚೆ ನಡೆಸಿದ್ದರು.

ಪೆಟ್ರೋಲ್-ಡೀಸೆಲ್ ಬೆಲೆ ಇಳಿಸಲು ಸಾಧ್ಯವೇ ಎಂಬ ಬಗ್ಗೆ ಸಮಾಲೋಚನೆ ನಡೆಸಿರುವ ಮೋದಿ ಅವರು,

 ಬೆಲೆ‌ ಇಳಿಸಿದರೆ ಬೊಕ್ಕಸದ ಮೇಲೆ ಬೀರಬಹುದಾದ ಪರಿಣಾಮಗಳು ಹಾಗೂ ರಾಜಕೀಯ ಪರಿಣಾಮಗಳ ಕುರಿತು ಚರ್ಚೆ ನಡೆಸಿದ್ದರು

 

About the author

ಕನ್ನಡ ಟುಡೆ

Leave a Comment